ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವನರ್ತಕ ಸಾವು

Last Updated 30 ಮಾರ್ಚ್ 2023, 9:37 IST
ಅಕ್ಷರ ಗಾತ್ರ

ಉಪ್ಪಿನಂಗಡಿ: ಕಡಬ ತಾಲ್ಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ದೈವನರ್ತನ ಮಾಡುತ್ತಿರುವಾಗಲೇ ದೈವನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಎಡಮಂಗಲ ಗ್ರಾಮದ ಕಾಂತು ಅಜಿಲ ಮೂಲಂಗೀರಿ (ಬಾಬು– 55ವ) ಮೃತರು. ಅವರು ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ದೈವಾರಾಧಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಗುರುವಾರ ನಸುಕಿನ ಜಾವ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದರು.

ಅವರು ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT