ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಚೇರಿಯಲ್ಲಿ ಹಕ್ಕಿಗಳಿಗೆ ನೀರಿಡಿ: ಮುಲ್ಲೈ ಮುಗಿಲನ್ ಸುತ್ತೋಲೆ

Published 8 ಏಪ್ರಿಲ್ 2024, 16:27 IST
Last Updated 8 ಏಪ್ರಿಲ್ 2024, 16:27 IST
ಅಕ್ಷರ ಗಾತ್ರ

ಮಂಗಳೂರು: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಯ ಕಟ್ಟಡಗಳ ಮೇಲೆ ನೆರಳಿನ ಆಶ್ರಯ ಇರುವಲ್ಲಿ ಮಡಕೆ, ಪಾತ್ರೆ, ಅಥವಾ ಟಬ್‌ಗಳಲ್ಲಿ ಸಾಕಷ್ಟು ನೀರು ತುಂಬಿಸಿಡುವ ಮೂಲಕ ಹಕ್ಕಿಗಳಿಗೆ ನೀರುಣಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೋಮವಾರ ಸುತ್ತೋಲೆ ಹೊರಡಿಸಿದ್ದಾರೆ.

ಬೇಸಿಗೆಯಲ್ಲಿ ಮಳೆ ಕೊರತೆಯಿಂದಾಗಿ ಬರ ಪರಿಸ್ಥಿತಿ ಉಂಟಾಗಿದೆ. ಒಂದು ವಾರದಿಂದ ಈಚೆಗೆ ಜಿಲ್ಲೆಯಲ್ಲೂ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಹಕ್ಕಿಗಳಿಗೆ ಕೂಡಾ ಕುಡಿಯುವ ನೀರಿನ ಅಭಾವ ಉಂಟಾಗಿ, ತೊಂದರೆಗಳಾಗುವ ಸಾಧ್ಯತೆ ಇದೆ. ಬೇಸಿಗೆಯಲ್ಲಿ ಉಷ್ಣಾಂಶ ಹೆಚ್ಚಾದಾಗ ಪಕ್ಷಿಗಳಿಗೆ ಹೆಚ್ಚು ನೀರಿನ ಅಗತ್ಯವಿದೆ. ಬಿಸಿಲಿನ ಶಾಖದ ಹೊಡೆತದಿಂದ ಹಕ್ಕಿಗಳನ್ನು ರಕ್ಷಿಸಲು, ಅವುಗಳಿಗೆ ಕುಡಿಯುವ ನೀರು ಒದಗಿಸುವುದು ಅತ್ಯವಶ್ಯಕ ಎಂದು ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಹಕ್ಕಿಗಳಿಗೆ ಮಡಕೆ, ಪಾತ್ರೆ, ಟಬ್‌ಗಳಲ್ಲಿ ಇಡುವ ನೀರನ್ನು ಆಗಾಗ ಬದಲಾಯಿಸುವ ಮೂಲಕ ಸೊಳ್ಳೆಗಳು ನಿಲ್ಲದಂತೆ ಮುಂಜಾಗ್ರತೆ ವಹಿಸಬೇಕು. ಈ ಕ್ರಮ ಕೈಗೊಂಡ ಬಗ್ಗೆ ಛಾಯಾಚಿತ್ರದೊಂದಿಗೆ ಪಾಲನಾ ವರದಿಯನ್ನು ಈ ಕಚೇರಿಗೆ ಸಲ್ಲಿಸಬೇಕು ಎಂದೂ ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT