ಶುಕ್ರವಾರ, ಜೂನ್ 25, 2021
22 °C
ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಜಾರಿ

ಕೋವಿಡ್‌-19: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಂತ್ಯದ ಕರ್ಫ್ಯೂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಔಷಧಿ ಅಂಗಡಿಗಳು ಮತ್ತು ಆಸ್ಪತ್ರೆ ಹೊರತುಪಡಿಸಿ ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಿಗ್ಗೆ 6 ರವರೆಗೆ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಈ ಸೇವೆಗಳನ್ನು ಹತ್ತಿರದ ಅಂಗಡಿಗಳಿಂದ ಮಾತ್ರ ಪಡೆಯಬೇಕು.

ತುರ್ತು, ಅಗತ್ಯ ಸೇವೆಗಳು, ನಿರಂತರ ಕಾರ್ಯಾಚರಣೆ ಅಗತ್ಯವಿರುವ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಮಾತ್ರವೇ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಯಾವುದೇ ನಿರ್ಮಾಣ ಚಟುವಟಿಕೆಗಳಿಗೆ ಅವಕಾಶ ಇಲ್ಲ. ನಿರ್ಮಾಣ ಸ್ಥಳದಲ್ಲಿಯೇ ಕಾರ್ಮಿಕರು ಲಭ್ಯವಿದ್ದಲ್ಲಿ, ಅಂತಹ ಕಾಮಗಾರಿ ನಡೆಸಬಹುದು.

ರೋಗಿಗಳು ಮತ್ತು ಅವರ ಆರೈಕೆದಾರರು, ವೈದ್ಯಕೀಯ ತುರ್ತು ಸಂದರ್ಭದಲ್ಲಿ ಜನರಿಗೆ ಕನಿಷ್ಠ ಪುರಾವೆಗಳೊಂದಿಗೆ ಸಂಚರಿಸಲು ಅನುಮತಿ ನೀಡಲಾಗಿದೆ. ಮೇ 8 ಮತ್ತು 9 ರಂದು ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ಮಾರ್ಗಸೂಚಿಯಂತೆ ನಡೆಸಲು ಅನುಮತಿ ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು