ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಜಾಂಬೂರಿ: ಪುಸ್ತಕ ಮಳಿಗೆಗಳಿಗೆ ಆಹ್ವಾನ 

ಉಚಿತ ಪ್ರವೇಶ; ಮಳಿಗೆಯ ತಲಾ ಇಬ್ಬರಿಗೆ ವಸತಿ–ಊಟದ ವ್ಯವಸ್ಥೆ
Last Updated 3 ನವೆಂಬರ್ 2022, 6:15 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಇಲ್ಲಿಯ ಆಳ್ವಾಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಡಿ.21ರಿಂದ 27ರ ವರೆಗೆ ನಡೆಯುವ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ಅಂಗವಾಗಿ ಬೃಹತ್ ಪುಸ್ತಕ ಪ್ರದರ್ಶನ ಏರ್ಪಡಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮಾರಾಟ ಮಳಿಗೆಗಳನ್ನು ಆಹ್ವಾನಿಸಲಾಗಿದೆ.

ಜಾಂಬೂರಿಯಲ್ಲಿ ದೇಶ –ವಿದೇಶಗಳ ವಿದ್ಯಾರ್ಥಿಗಳು ಪ್ರತಿನಿಧಿಗಳಾಗಿ ಭಾಗವಹಿಸುವುದರಿಂದ ಏಳು ದಿನ ಪುಸ್ತಕ ಪ್ರದರ್ಶನ ಆಯೋಜಿಸಲಾಗುವುದು. ಕನ್ನಡ ಪುಸ್ತಕಗಳ ಜತೆಗೆ ಇಂಗ್ಲಿಷ್, ಹಿಂದಿ ಹಾಗೂ ಇತರ ಪ್ರಾದೇಶಿಕ ಭಾಷೆಗಳ ಪುಸ್ತಕ ಮಳಿಗೆಗಳು ಇರಲಿವೆ ಎಂದು ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಡಾ.ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಳಿಗೆಗಳಿಗೆ ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ. ಮಳಿಗೆಯ ಇಬ್ಬರಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು. ಆಸಕ್ತರು ನವೆಂಬರ್ 30ರ ಒಳಗಾಗಿ ಸ್ಕೌಟ್ಸ್‌ ಮತ್ತು ಗೈಡ್ಸ್ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ -ಪುಸ್ತಕ ಮೇಳ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227 ಇವರಿಗೆ ಪತ್ರ ಮುಖೇನ ಮಾಹಿತಿ ನೀಡಿ ಖಚಿತಪಡಿಸಿಕೊಳ್ಳಬೇಕು. ವಿವರಗಳಿಗೆ ಡಾ.ಯೋಗೀಶ್ ಕೈರೋಡಿ (ಮೊ 9845704371) ಅವರನ್ನು ಸಂಪರ್ಕಿಸಬೇಕು ಎಂದು ಅವರು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT