ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಜಿಕಲ್ ಘಟಕ: ಕಾಮಗಾರಿ ಪೂರ್ಣಗೊಳಸಲು ಸೂಚನೆ

Published 29 ಫೆಬ್ರುವರಿ 2024, 7:55 IST
Last Updated 29 ಫೆಬ್ರುವರಿ 2024, 7:55 IST
ಅಕ್ಷರ ಗಾತ್ರ

ಮಂಗಳೂರು: ನಗರದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಾಣವಾಗಿರುವ ಸರ್ಜಿಕಲ್ ಬ್ಲಾಕ್‌ನ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಸಮಧಾನ ವ್ಯಕ್ತಪಡಿಸಿದರು.

ನಗರದ ವೆನ್‍ಲಾಕ್ ಆಸ್ಪತ್ರೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಶೀಘ್ರ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ತ್ವರಿತ ಸೇವೆ ನೀಡಬೇಕು. ಆಸ್ಪತ್ರೆಯ ತ್ಯಾಜ್ಯ ಘಟಕದ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ನಿರ್ವಹಣೆಗೆ ಟೆಂಡರ್ ಕರೆಯಬೇಕು. ಆಸ್ವತ್ರೆಗೆ ಬರುವ ಎಲ್ಲ ರೋಗಿಗಳ ವೈಯಕ್ತಿಕ ದಾಖಲೆಗಳು, ರೋಗಿಯ ಕಾಯಿಲೆ ವಿವರ ಒಳಗೊಂಡ ಮಾಹಿತಿ ಹಾಗೂ ಚಿಕಿತ್ಸೆಯ ವಿವರಗಳ ಬಗ್ಗೆ ದಾಖಲೆಯನ್ನು ತಯಾರು ಮಾಡಬೇಕು ಎಂದು ಸೂಚಿಸಿದರು.

ಬೇಸಿಗೆಯಲ್ಲಿ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ ಕ್ರಮ ಕೈಗೊಳ್ಳುವಂತೆ, ಅಗತ್ಯ ಬಂದಲ್ಲಿ ಆಸ್ಪತ್ರೆಗೆ ಹೊಸ ಕೊಳವೆಬಾವಿ ಕೊರೆಯುವಂತೆ ಸೂಚಿಸಿದರು.

ವೆನ್‍ಲಾಕ್ ಅಧೀಕ್ಷಕಿ ಜೆಸಿಂತಾ ಡಿಸೋಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಎಚ್.ಆರ್.ತಿಮ್ಮಯ್ಯ, ಸ್ಮಾರ್ಟ್‍ಸಿಟಿ ಎಂಡಿ ರಾಜು.ಕೆ ಇದ್ದರು.

ಮಕ್ಕಳ ವಿಭಾಗಕ್ಕೆ ಎರಡು ವಾರಗಳಿಂದ ನೀರು ಸರಿಯಾಗಿ ಸರಬರಾಜು ಆಗದಿರುವ ಬಗ್ಗೆ ದೂರು ಆಲಿಸಿ, ತಕ್ಷಣ ಕ್ರಮ ಜರುಗಿಸುವಂತೆ ಡಿಸಿ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT