ಮಂಗಳವಾರ, ಏಪ್ರಿಲ್ 20, 2021
32 °C

ರಾಮಮಂದಿರ ಕುರಿತು ವಾಟ್ಸ್‌ಆ್ಯಪ್‌ ಸ್ಟೇಟಸ್‌: ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಪ್ಪಿನಂಗಡಿ: ರಾಮ ಮಂದಿರದ ಬಗ್ಗೆ ವಾಟ್ಸ್ಆ್ಯಪ್‌ ಸ್ಟೇಟಸ್‌ ಹಾಕಿದ್ದನ್ನು ವಿರೋಧಿಸಿದ ಯುವಕರ ತಂಡವೊಂದು, ಮಂಗಳವಾರ ರಾತ್ರಿ ಯುವಕನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿ, ಜೀವ ಬೆದರಿಕೆ ಒಡ್ಡಿರುವ ಘಟನೆ ಬಗ್ಗೆ ನೆಕ್ಕಿಲಾಡಿ ಗ್ರಾಮದ ಆದರ್ಶ ನಗರದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ತಮ್ಮ ಮೇಲೆ ಉಬೈದ್ ಮತ್ತು 6 ಮಂದಿಯ ತಂಡ ಹಲ್ಲೆಗೆ ಯತ್ನಿಸಿದೆ.  ಮನೆಯೊಳಗೆ ನುಗ್ಗಿ ಜೀವ ಬೆದರಿಕೆ ಒಡ್ಡಿರುವುದಾಗಿ ನೆಕ್ಕಿಲಾಡಿ ನಿವಾಸಿ ಮುಕುಂದ  ಅವರು ಉಪ್ಪಿನಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

‘ಎಸ್‌ಡಿಪಿಐ ಕಾರ್ಯಕರ್ತರಾದ ಉಬೈದ್, ಶರೀಫ್, ಸೈಫ್, ಪಕ್ಷಿನ್, ಸಲೀಂ ಅವರನ್ನೊಳಗೊಂಡ ತಂಡ,  ವಾಟ್ಸ್ಅಪ್ ಸ್ಟೇಟಸ್‌ನಲ್ಲಿ ರಾಮಮಂದಿರದ ಕುರಿತು ಹಾಕಿದ್ದನ್ನು ತೆಗೆಯಬೇಕು ಎಂದು ಹೇಳಿ ಹಲ್ಲೆಗೆ ಯತ್ನಿಸಿದರು’ ಎಂದು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಮುಕುಂದ ತಿಳಿಸಿದರು.

ಘಟನೆಗೆ ಸಂಬಂಧಿಸಿದಂತೆ ಮುಕುಂದ ಅವರು ದೂರು ನೀಡಿದ್ದು, ಉಬೈದ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಉಪ್ಪಿನಂಗಡಿ ಎಸ್.ಐ. ಈರಯ್ಯ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.