ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಟ್ಲ: ಮನೆಗೆ ನುಗ್ಗಿ ಚಿನ್ನಾಭರಣ ಕಳವು

Published : 7 ಆಗಸ್ಟ್ 2024, 7:22 IST
Last Updated : 7 ಆಗಸ್ಟ್ 2024, 7:22 IST
ಫಾಲೋ ಮಾಡಿ
Comments

ವಿಟ್ಲ: ಸಾಲೆತ್ತೂರು ನಿವಾಸಿ ಜಗನ್ನಾಥ್  ಎಂಬುವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ, ನಗದು ಕಳವು ಮಾಡಿದ ಘಟನೆ ಮಂಗಳವಾರ ನಡೆದಿದೆ.  ಜಗನ್ನಾಥ್‌ ಅವರು ಕೆಲಸದ ನಿಮಿತ್ತ ವಿದೇಶದಲ್ಲಿದ್ದು,  ಮನೆಯಲ್ಲಿ ಅವರ ಪತ್ನಿ ವಿಜಯಾ ಹಾಗೂ ಇಬ್ಬರು ಮಕ್ಕಳು ಮಾತ್ರ ವಾಸವಿದ್ದರು.

ಆಗಸ್ಟ್‌ 3ರಂದು ವಿಜಯಾ ಅವರು ಮಕ್ಕಳೊಂದಿಗೆ ಈಶ್ವರಮಂಗಲ ಪಂಚೋಡಿಯಲ್ಲಿರುವ ತವರು ಮನೆಗೆ ಹೋಗಿದ್ದ ವೇಳೆ ಕಳ್ಳತನ ನಡೆದಿದೆ. 34 ಗ್ರಾಂ ಚಿನ್ನಾಭರಣ ಹಾಗೂ ₹6 ಸಾವಿರ ನಗದು ಕಳುವಾಗಿದೆ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಮನೆ ಕಾವಲಿಗಿದ್ದ ಎರಡು ಶ್ವಾನಗಳಲ್ಲಿ ಒಂದು ಶ್ವಾನ ಕಾಣೆಯಾಗಿದೆ. ಕಳ್ಳರು ನಾಯಿಯನ್ನೂ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT