ಮಂಗಳವಾರ, ಏಪ್ರಿಲ್ 20, 2021
32 °C

ಬಂಟ್ವಾಳ: ಪತ್ನಿಯಿಂದಲೇ ಪತಿ ಹತ್ಯೆ, ಆರೋಪಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಂಟ್ವಾಳ: ಇಲ್ಲಿನ ನಾವೂರ ಗ್ರಾಮದ ಪುರ ಕ್ವಾಟ೯ಸ್೯ ಎಂಬಲ್ಲಿ ಮಹಿಳೆಯೊಬ್ಬರು ಗಂಡನನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿದ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಆರೋಪಿಯನ್ನು ಉಮಾವತಿ (50) ಎಂದು ಗುರುತಿಸಲಾಗಿದೆ.

ಇದೇ 3ರಂದು ರಾತ್ರಿ ಎಂದಿನಂತೆ ಪತಿ ಸೇಸಪ್ಪ ಪೂಜಾರಿ (60) ಕುಡಿದು ಬಂದು ಪತ್ನಿಗೆ ಹಲ್ಲೆ ನಡೆಸಿದಾಗ ಇವರ ನಡುವೆ ಪರಸ್ಪರ ಹೊಡೆದಾಟ ನಡೆದಿತ್ತು. ಇದೇ ವೇಳೆ ಉಮಾವತಿ ಅವರು ಪತಿಯ ಹಣೆಗೆ ಕತ್ತಿಯಿಂದ ಕಡಿದಿದ್ದು, ಇದಕ್ಕೆ ಚಿಕಿತ್ಸೆ ಪಡೆದಿರಲಿಲ್ಲ. ಇದರಿಂದಾಗಿ ಮನೆಯಲ್ಲೆ ತೀವ್ರ ರಕ್ತಸ್ರಾವಗೊಂಡು ಮೃತಪಟ್ಟಿದ್ದಾರೆ.

ಮೃ ತರ ಪುತ್ರಿ ನಯನ ದೂರು ನೀಡಿದ ಹಿನ್ನೆಲೆಯಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಮಹಿಳೆಯನ್ನು ಶನಿವಾರ ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು