ಬುಧವಾರ, ಫೆಬ್ರವರಿ 19, 2020
28 °C
ದೌರ್ಜನ್ಯ, ಜಾತಿ ನಿಂದನೆ ಆರೋಪ

ಪತಿ ವಿರುದ್ಧ ಪತ್ನಿ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪತಿ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ ಎಂದು ವಾಮಂಜೂರು ನಿವಾಸಿಯಾಗಿರುವ ಮಹಿಳೆಯೊಬ್ಬರು ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ವಾಮಂಜೂರು ಮಂಗಳಾ ನಗರ ನಿವಾಸಿ ವಿನೋದ್‌ (45) ವಿರುದ್ಧ ಅವರ ಪತ್ನಿ ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪತಿ ಮತ್ತು ಪತ್ನಿ ಪ್ರೀತಿಸಿ 2005ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಮೂವರು ಮಕ್ಕಳಿದ್ದಾರೆ.

‘ನೀನು ಪರಿಶಿಷ್ಟ ಜಾತಿಯವಳು. ನನಗೆ ಯಾವುದೇ ವರದಕ್ಷಿಣೆ ನೀಡಲಿಲ್ಲ. ಬೇರೆಯವರನ್ನು ಮದುವೆ ಆಗಿದ್ದರೆ ನೀಡುತ್ತಿದ್ದರು’ ಎಂದು ಪತಿ ದೈಹಿಕ ಮಾಗೂ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ. ಬೇರೆ ಹುಡುಗಿಯನ್ನು ಮದುವೆ ಆಗುತ್ತೇನೆ ಎಂದು ಬೆದರಿಸುತ್ತಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)