ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು | ಪತ್ನಿ ಕೊಲೆ: ಗಂಡನಿಗೆ ಕಠಿಣ ಜೀವಾವಧಿ ಶಿಕ್ಷೆ

ಸಂತ್ರಸ್ತ ಮಕ್ಕಳಿಗೆ ಸೂಕ್ತ ಪರಿಹಾರ ನಿಡಲು ಕ್ರಮವಹಿಸುವಂತೆ ನ್ಯಾಯಾಲಯ ಸೂಚನೆ
Published 9 ಏಪ್ರಿಲ್ 2024, 8:18 IST
Last Updated 9 ಏಪ್ರಿಲ್ 2024, 8:18 IST
ಅಕ್ಷರ ಗಾತ್ರ

ಮಂಗಳೂರು: ಪತ್ನಿಯನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರಿಂದ ಅಪರಾಧಿಗೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 1.50 ಲಕ್ಷ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ನಗರದ ಕಾವೂರಿನ ಗಣೇಶ್ ಕುಮಾರ್ (46 ವರ್ಷ) ಶಿಕ್ಷೆಗೆ ಒಳಗಾದ ಅಪರಾಧಿ. 

ಗಣೇಶ್‌ ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿ ಶಾಂತಾ ಹಾಗೂ ತನ್ನ ಇಬ್ಬರು ಮಕ್ಕಳ ಜೊತೆ ವಾಸವಿದ್ದ. ಸಂಸಾರಿಕ ವಿಚಾರವಾಗಿ ಪತ್ನಿ ಜೊತೆ  ನಿತ್ಯವೂ ಗಲಾಟೆ ಮಾಡುತ್ತಿದ್ದ. ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದಲ್ಲದೇ ಜೀವ ಬೆದರಿಕೆ ಒಡ್ಡುತ್ತಿದ್ದ. 2020ರ ಜುಲೈ 1ರಂದು ಸಂಜೆ 5.30ರ ಸುಮಾರಿಗೆ ಮನೆಗೆ ಸಾಮಾನು ತರುವ ನೆಪದಲ್ಲಿ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ದಿದ್ದ. ಅಂದು ಸಂಜೆ 7ರಿಂದ 7.20ರ ನಡುವೆ  ಅಂತೋನಿ ಕಟ್ಟೆ ಎಂಬಲ್ಲಿಗೆ ಪತ್ನಿಯನ್ನು ಕರೆದೊಯ್ದು, ಕುತ್ತಿಗೆ ಹಿಡಿದು ಹಿಸುಕಿ, ಕಪ್ಪು ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿದ್ದ. ಈ ಕೃತ್ಯದ ಬಗ್ಗೆ ದೂರುನೀಡಿದ್ದ ಲೀಲಾವತಿ ಎಂಬುವರಿಗೂ  ಜೀವ ಬೆದರಿಕೆ ಒಡ್ಡಿದ್ದ. ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್‌ ಇನ್‌ಸ್ಪೆಕ್ಟರ್‌ ರಾಘವ ಎಸ್. ಅವರು  ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ಆರನೇ ಹೆಚ್ಚುವರಿ ಜಿಲ್ಲಾ ಮತ್ತುಸೆಷನ್ಸ್‌  ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್.ವಿ  ಅವರು ಪ್ರಕರಣದ ವಿಚಾರಣೆ ನಡೆಸಿದ್ದರು. ಗಣೇಶ್‌ ಮೇಲಿನ ಕೊಲೆ ಆರೋಪ ಸಾಬೀತಾಗಿದ್ದರಿಂದ ಆತನಿಗೆ ಕಠಿಣ ಜೀವಾವಧಿ ಶಿಕ್ಷೆ ಮತ್ತು₹ 1 ಲಕ್ಷ ದಂಡ, ಪತ್ನಿಗೆ ಹಿಂಸೆ ನೀಡಿದ್ದಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ, ಜೀವ ಬೆದರಿಕೆ ಒಡ್ಡಿದ್ದಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ  ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಅಪರಾಧಿಯು ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದೂ ಅವರು ಆದೇಶ ಮಾಡಿದ್ದಾರೆ.

ಈ ಕೊಲೆಯಿಂದ ಸಂತ್ರಸ್ತರಾಗಿರುವ ದಂಪತಿಯ ಇಬ್ಬರು ಮಕ್ಕಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದ್ದಾರೆ.  ಈ ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಜ್ಯೋತಿ ಪ್ರಮೋದ ನಾಯಕ ಮತ್ತು ಬಿ.ಶೇಖರ ಶೆಟ್ಟಿ ಹಾಗೂ ಚೌಧರಿ ಮೋತಿಲಾಲ ಅವರು ಸಂತ್ರಸ್ತರ ಪರ ವಾದ ಮಂಡಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT