ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮಹಿಳೆ ಸಾವು, ದಕ್ಷಿಣ ಕನ್ನಡ ಜಿಲ್ಲೆ ಮೃತರ ಸಂಖ್ಯೆ 10ಕ್ಕೆ ಏರಿಕೆ

Last Updated 24 ಜೂನ್ 2020, 11:01 IST
ಅಕ್ಷರ ಗಾತ್ರ

ಮಂಗಳೂರು: ಮಂಗಳವಾರ ಕೋವಿಡ್‌–19 ದೃಢಪಟ್ಟಿದ್ದ ಉಳ್ಳಾಲ ಅಝಾದ್‌ನಗರದ 59 ವರ್ಷದ ಮಹಿಳೆ ಬುಧವಾರ ಮೃತಪಟ್ಟಿದ್ದಾರೆ.

ಇದರಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್–19ನಿಂದ ಮೃತರಾದವರ ಸಂಖ್ಯೆ 10ಕ್ಕೆ ಏರಿದೆ. ಈ ಪೈಕಿ ಇಬ್ಬರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ.

ಈ ಮಹಿಳೆಗೆ 10 ದಿನಗಳ ಹಿಂದೆ ಬೇಧಿ ಉಂಟಾಗಿದ್ದರಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗೆ ಎರಡು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯ ಗಂಟಲುದ್ರವ ಪರೀಕ್ಷೆ ಮಾಡಲಾಗಿದ್ದು, ಮಂಗಳವಾರ ಕೋವಿಡ್–19 ಇರುವುದು ದೃಢವಾಗಿದ್ದರಿಂದ ನಗರದ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಬುಧವಾರ ಚಿಕಿತ್ಸೆಗೆ ಸ್ಪಂದಿಸದೇ ಮಹಿಳೆ ಮೃತಪಟ್ಟಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಅಂತ್ಯಸಂಸ್ಕಾರಕ್ಕೆ ಶಾಸಕ ಯು.ಟಿ. ಖಾದರ್ ನೇತೃತ್ವದಲ್ಲಿ ಮುಕ್ಕಚ್ಚೇರಿ ಮಸೀದಿಯಲ್ಲಿ ಅಗತ್ಯ ಸಿದ್ಧತೆಗಳನ್ನು ನಡೆಸಲಾಗುತ್ತಿದೆ.

ಮಹಿಳೆ ಮನೆ ಬಿಟ್ಟು ಹೊರಗೆ ಹೋಗಿಲ್ಲ. ಮನೆಯಲ್ಲಿರುವವರೂ ಹೊರಗಿನಿಂದ ಬಂದಿಲ್ಲ. ಆದರೆ ಮಹಿಳೆಗೆ ಸೋಂಕು ಹೇಗೆ ತಗುಲಿದೆ ಎನ್ನುವುದೇ ನಿಗೂಢವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಎಂಟು ದಿನಗಳ ಕಾಲ ಚಿಕಿತ್ಸೆಯಲ್ಲಿರುವಾಗ ಸೋಂಕು ತಗುಲಿರುವ ಸಾಧ್ಯತೆಯ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT