ಮೂಡುಬಿದಿರೆ: ಇರುವೈಲ್ನ ಬಂಗಾರ್ ಗುಡ್ಡೆಯಲ್ಲಿ ಬುಧವಾರ ಬೆಳಿಗ್ಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಲಿಲ್ಲಿ ಡಿಸೋಜ (55) ಸಾವಿಗೀಡಾಗಿದ್ದಾರೆ. ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಮೆಸ್ಕಾಂ ವಿರುದ್ಧ ಘೋಷಭೆ ಕೂಗಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದರು.

ಲಿಲ್ಲಿ ಡಿಸೋಜ ಮನೆ ಹತ್ತಿರದ ವಿದ್ಯುತ್ ಕಂಬದ ತಂತಿ ಮಂಗಳವಾರ ರಾತ್ರಿ ತುಂಡಾಗಿ ಮನೆಯ ಕೊಟ್ಟಿಗೆಯ ಒಳಗೆ ಬಿದ್ದಿತ್ತು. ಬೆಳಿಗ್ಗೆ ಕೊಟ್ಟಿಗೆಗೆ ಬಂದ ಲಿಲ್ಲಿ ಅವರು ಅದನ್ನು ತುಳಿದರೆನ್ನಲಾಗಿದೆ.

ಮಂಗಳವಾರ ರಾತ್ರಿ ತಂತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮೆಸ್ಕಾಂಗೆ ತಿಳಿಸಿದರೂ ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ದೂರಿದರು. ಶಾಸಕ ಉಮಾನಾಥ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಘಟನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಮೃತರ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಮೆಸ್ಕಾಂ ಸಹಾಯಕ ಎಂಜಿನಿಯರ್ ಮೋಹನ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.