ಉಳ್ಳಾಲ (ದಕ್ಷಿಣ ಕನ್ನಡ): ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಗುರುವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಖಂಡಿಕ ನಿವಾಸಿ ಮುತ್ತಲಿಬ್ ಎಂಬುವವರ ಪತ್ನಿ ಖುಬ್ರಾ ಮೃತಪಟ್ಟವರು.

ಖುಬ್ರಾ ಮತ್ತು ಮೂವರು ಮಕ್ಕಳು ಒಂದೇ ಕೊಠಡಿಯಲ್ಲಿ ಕಳೆದ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಗ್ಯಾಸ್ ಸೋರಿಕೆಯಿಂದ ಈ ದುರಂತ ಸಂಭವಿಸಿತ್ತು. ಇದರಿಂದ ಮನೆಯೊಡತಿ ಖುಬ್ರಾ ಹಾಗೂ ಅವರ ಮೂವರು ಮಕ್ಕಳಾದ ಮೆಅದಿಯಾ, ಮಝಿಯಾ, ಮಾಯಿದಾ ಗಾಯಗೊಂಡಿದ್ದರು. ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಗಂಭೀರವಾಗಿ ಗಾಯೊಂಡಿದ್ದ ಖುಬ್ರಾ ಮೃತಪಟ್ಟಿದ್ದಾರೆ. ಮೂವರು ಮಕ್ಕಳಿಗೆ ಚಿಕಿತ್ಸೆ ಮುಂದುವರಿದಿದೆ.

ಖುಬ್ರಾ ಅವರ ಅಂತ್ಯ ಸಂಸ್ಕಾರ ಕಲ್ಕಟ್ಟ ಖಂಡಿಕ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.