ಸುಬ್ರಹ್ಮಣ್ಯ: 2025 -26ನೇ ಸಾಲಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಯ ಮಹಿಳಾ ಗ್ರಾಮ ಸಭೆಯು ಪಂಚಾಯಿತಿ ಅಧ್ಯಕ್ಷೆ ಸುಜಾತ ಕಲ್ಲಾಜೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆಸಲಾಯಿತು.

ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿಗೆ ಒಳಪಟ್ಟ ಸುಬ್ರಹ್ಮಣ್ಯ, ಏನೆಕಲ್ಲು, ಐನೆಕಿದು ಗ್ರಾಮಗಳ ಮಹಿಳೆಯರು, ಓಂಶ್ರೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಸುಬ್ರಹ್ಮಣ್ಯದ ಪದಾಧಿಕಾರಿಗಳು, ಎಂ.ಬಿ.ಕೆ, ಎಲ್ಸಿಆರ್ಪಿ ಒಕ್ಕೂಟದ ಸಖಿಯರು, ಸದಸ್ಯರು, ಮಹಿಳಾ ಸ್ವಸಹಾಯ ಸಂಘದ ಸದಸ್ಯೆಯರು, ವಾಣಿ ವಣಿತ ಸಮಾಜ ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವರಮಹಾಲಕ್ಷ್ಮಿ ಸಮಿತಿಗಳು, ಮಹಿಳಾ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಬಲೀಕರಣ, ಮಕ್ಕಳ ಪೋಷಣೆ ಮತ್ತು ರಕ್ಷಣೆ ಮಹಿಳಾ ಆರೋಗ್ಯ ಸುಧಾರಣೆ, ನೈರ್ಮಲ್ಯ ಹಾಗೂ ಮಹಿಳಾಪರ ಕಾನೂನು, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಗಳ ಮಾಹಿತಿ ನೀಡಲಾಯಿತು.

ಮಹಿಳೆಯರ ಸುಖಿ ಜೀವನ ಹಾಗೂ ಪ್ರಾಮುಖ್ಯತೆ ಕುರಿರು ಎಸ್ಎಸ್ ಕಾಲೇಜಿನ ಉಪನ್ಯಾಸಕಿ ಆರತಿ ಮಾಹಿತಿ ನೀಡಿದರು. ಲಿಂಗತ್ವ ದೌರ್ಜನ್ಯ ಕುರಿತು ರಾಷ್ಟ್ರೀಯ ಅಭಯಾನದ ತಾಲ್ಲೂಕು ಪಂಚಾಯಿತಿ ಸಂಪನ್ಮೂಲ ವ್ಯಕ್ತಿ ಧನ್ಯಶ್ರೀ ಮಾಹಿತಿ ನೀಡಿದರು.

ಸಾಂಕ್ರಾಮಿಕ ರೋಗದ ರೋಗದ ಬಗ್ಗೆ ಸಮುದಾಯ ಆರೋಗ್ಯ ಅಧಿಕಾರಿ ನವ್ಯಶ್ರೀ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರು ಭಾಗವಹಿಸಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೋನಪ್ಪ ಡಿ. ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.