ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಕೊರೊನಾ ಸೋಂಕಿನ ಸಂಭಾವ್ಯ ಮೂರನೇ ಅಲೆ; ಮುನ್ನೆಚ್ಚರಿಕೆಗೆ ಡಿಸಿ ಸೂಚನೆ

Last Updated 23 ಜುಲೈ 2021, 16:27 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್-19 ನಿಯಂತ್ರಿಸುವಲ್ಲಿ ಜಿಲ್ಲಾಡಳಿತದೊಂದಿಗೆ ವೈದ್ಯಕೀಯ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ತಂಡಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದು, ಸಂಭಾವ್ಯ ಮೂರನೇ ಅಲೆ ಎದುರಾದಲ್ಲಿ ಅದನ್ನು ತಡೆಗಟ್ಟಲು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದರು.

ನಗರದ ವೆನ್ಲಾಕ್ ಮಕ್ಕಳ ಆಸ್ಪತ್ರೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತೀಯ ಶಿಶು ವೈದ್ಯರ ಜಿಲ್ಲಾ ಸಂಘದಆಶ್ರಯದಲ್ಲಿಕೋವಿಡ್ 3ನೇ ಅಲೆ ತಡೆಗಟ್ಟುವಿಕೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಶುಕ್ರವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್‌ ಕರ್ತವ್ಯದ ವೈದ್ಯರು, ಸಿಬ್ಬಂದಿಗೆ ತರಬೇತಿ ನೀಡಿ, ಆತ್ಮಸ್ಥೆರ್ಯ ಮತ್ತಷ್ಟು ಹೆಚ್ಚಿಸಬೇಕು, ಜಿಲ್ಲಾಡಳಿತ, ಇಲಾಖೆಗಳ ಸಮನ್ವಯತೆಯಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು, ಮಕ್ಕಳಿಗೆ ಬರಬಹುದಾದ ಸೋಂಕನ್ನು ತಡೆಗಟ್ಟಲು ಸಜ್ಜಾಗಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತೆಯರ ಮೂಲಕ ಜನ ಜಾಗೃತಿ ಮೂಡಿಸಬೇಕು, ಕ್ಷೇತ್ರ ಭೇಟಿಯಲ್ಲಿ 18 ವರ್ಷದೊಳಗಿನ ಎಲ್ಲ ಮಕ್ಕಳ ಆರೋಗ್ಯ ವಿವರ ಪಡೆದು, ಮಕ್ಕಳಲ್ಲಿ ಕಂಡುಬರುವ ತೊಂದರೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ನೀಡಬೇಕು. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ವೈದ್ಯಾಧಿಕಾರಿ ಮೂಲಕ ಶಿಫಾರಸು ಮಾಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಆರೋಗ್ಯ ಕೇಂದ್ರಗಳಿಗೆ ಚಿಕಿತ್ಸೆಗೆ ಬರುವ ಮಕ್ಕಳಲ್ಲಿ ಸಾಮಾನ್ಯ ರೋಗಲಕ್ಷಣಗಳು ಕಂಡುಬಂದಲ್ಲಿ ಚಿಕಿತ್ಸೆಗೆ ಮೊದಲ ಆದ್ಯತೆ ನೀಡಬೇಕು. ಕೋವಿಡ್ ಸೋಂಕಿನ ಮೂರನೇ ಅಲೆಯನ್ನು ತಡೆಗಟ್ಟಲು ಎಲ್ಲರೂ ಸಜ್ಜಾಗಬೇಕು ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ತಜ್ಞರಾದ ಡಾ. ಸ್ವಾತಿ ರಾವ್, ಕೆ.ಎಸ್. ಹೆಗ್ಡೆ, ಎಸ್.ಎಂ.ಒ ಡಬ್ಲ್ಯೂ.ಎಚ್.ಒ. ಡಾ. ಸತೀಶ್‍ಚಂದ್ರ ಹಾಗೂ ಕೆ.ಎಂ.ಸಿಯ ಮಕ್ಕಳ ತಜ್ಞ ಡಾ. ಶರತ್ ತರಬೇತಿ ನೀಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸದಾಶಿವ ಶಾನ್‍ಬೋಗ್, ಐ.ಎ.ಪಿ ಅಧ್ಯಕ್ಷ ಡಾ. ಮುರಳಿಕೃಷ್ಣನ್, ಐ.ಎ.ಪಿ ರಾಷ್ಟ್ರೀಯ ಅಧ್ಯಕ್ಷ ಡಾ. ಸಂತೋಷ್‌ ಸೋನ್ಸ್, ಸದಸ್ಯ ಕಾರ್ಯದರ್ಶಿ ಡಾ. ಶ್ರೀಕೃಷ್ಣ , ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಇದ್ದರು.

‘ವೈದ್ಯರ ತಂಡ ಸಿದ್ಧ’
ಕೋವಿಡ್-19 ಸೋಂಕಿನ ಸಂಭಾವ್ಯ ಮೂರನೇ ಅಲೆ ತಡೆಗಟ್ಟುವಲ್ಲಿ ಜಿಲ್ಲಾಡಳಿತದೊಂದಿಗೆ ಜಿಲ್ಲಾ ಶಿಶು ವೈದ್ಯರ ಸಂಘದಿಂದ ಸಂಪೂರ್ಣ ಸಹಕಾರವನ್ನು ನೀಡಲಾಗುವುದು. ತರಬೇತಿಯೊಂದಿಗೆ ವೈದ್ಯರ ತಂಡ ಕಾರ್ಯಪ್ರವೃತವಾಗಿದೆ ಎಂದು ಭಾರತೀಯ ಶಿಶು ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಮುರಳಿ ಕೃಷ್ಣ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT