ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗಸ್ಥ ಮಹಿಳೆಯರ ವಸತಿ: ದಾಖಲಾತಿ ಆರಂಭ

Last Updated 26 ಆಗಸ್ಟ್ 2022, 16:22 IST
ಅಕ್ಷರ ಗಾತ್ರ

ಮಂಗಳೂರು: ಪ್ರಸಕ್ತ ಸಾಲಿನಲ್ಲಿ ಮಂಗಳೂರು ನಗರ ವ್ಯಾಪ್ತಿಯ ಉದ್ಯೋಗಸ್ಥ ಮಹಿಳೆಯರಿಗೆ ಎರಡು ವಸತಿ ನಿಲಯವನ್ನು ಪ್ರಾರಂಭಿಸಲು ಆಡಳಿತಾತ್ಮಕ ಮಂಜೂರಾತಿ ದೊರೆತಿದೆ.ಉತ್ತರ ವಿಧಾನಸಭಾ ವ್ಯಾಪ್ತಿಯ ಕೊಂಚಾಡಿಯಲ್ಲಿ ಹಾಗೂ ದಕ್ಷಿಣ ವಿಧಾನ ಸಭಾ ವ್ಯಾಪ್ತಿಯ ಪಂಪ್‍ವೆಲ್‍ನಲ್ಲಿ ವಸತಿ ನಿಲಯಗಳು ಕಾರ್ಯನಿರ್ವಹಿಸಲಿವೆ.

ಈ ವಸತಿ ನಿಲಯಗಳಲ್ಲಿ ದಾಖಲಾತಿ ಪಡೆಯಲು ಇಚ್ಛಿಸುವ ಆಸಕ್ತ ಮಹಿಳೆಯರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ( 0824-2959809) ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು (0824-2454251) ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT