ಮಂಗಳೂರು: ದೀನದಯಾಳ್ ಅಂತ್ಯೋದಯ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಅಂಗವಾಗಿ ನಗರದ ಬೀದಿಬದಿ ವ್ಯಾಪಾರಿಗಳ ಬೆಂಬಲ ಉಪಘಟಕದಡಿ ಬೀದಿ ಬದಿ ವ್ಯಾಪಾರಿಗಳ ಕಾಯ್ದೆ ಬಗ್ಗೆ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪಾಲಿಕೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾಹಿತಿ ಕಾರ್ಯಾಗಾರ ಮಂಗಳವಾರ ನಡೆಯಿತು.
ಪಟ್ಟಣ ವ್ಯಾಪಾರ ಸಮಿತಿ ಸದಸ್ಯರಿಗೆ ಮತ್ತು ಬೀದಿ ಬದಿ ವ್ಯಾಪಾರಿಗಳಿಗೆ ಸಂಜೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಮಹಾಮಂಡಲದ ಅಧ್ಯಕ್ಷ ಮತ್ತು ಮೈಸೂರು ಮಹಾನಗರ ಪಾಲಿಕೆಯ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಭಾಸ್ಕರ್ ರಾಜೆ ಅರಸ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.
ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ, ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಭಾಗವಹಿಸಿದ್ದರು. ಸಮುದಾಯ ವ್ಯವಹಾರ ಅಧಿಕಾರಿ ಮಾಲಿನಿ ರಾಡ್ರಿಗಸ್ ಕಾರ್ಯಕ್ರಮ ನಿರೂಪಿಸಿದರು.