ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ತಾಯಂದಿರ ಕೊಡುಗೆ ಅನನ್ಯ: ಡಾ.ಎಲ್.ಎಚ್.ಮಂಜುನಾಥ್

ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ, ವಿಚಾರ ಗೋಷ್ಠಿ
Published 18 ಫೆಬ್ರುವರಿ 2024, 15:28 IST
Last Updated 18 ಫೆಬ್ರುವರಿ 2024, 15:28 IST
ಅಕ್ಷರ ಗಾತ್ರ

ಬೆಳ್ತಂಗಡಿ: ‘ಇಂದು ಹೆಣ್ಣು ಮಕ್ಕಳು ಆತ್ಮವಿಶ್ವಾಸದಿಂದ ಬದುಕುತ್ತಿದ್ದು, ಸಮೃದ್ಧ, ಸುಸಂಸ್ಕೃತ ಸಮಾಜ ನಿರ್ಮಾಣದಲ್ಲಿ ತಾಯಂದಿರ ಕೊಡುಗೆ ಅನನ್ಯವಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್ ಹೇಳಿದರು.

ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಗುರುವಾಯನಕೆರೆ ನೇತೃತ್ವದಲ್ಲಿ ‘ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ತಾಲ್ಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ’ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಣ್ಣು – ಗಂಡು ಎಂಬ ತಾರತಮ್ಯ ಸಲ್ಲದು. ಹೆಣ್ಣು ಮಕ್ಕಳು ಗಂಡನ ಬಳಿ ಆರ್ಥಿಕ ಅವಲಂಬನೆಗೆ ಒಳಗಾಗದೆ ವಿದ್ಯಾವಂತರಾಗಿ ಉದ್ಯೋಗವಂತರಾಗಬೇಕು’ ಎಂದರು.

ಅಧ್ಯಕ್ಷತೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್.ಶೆಟ್ಟಿ ವಹಿಸಿದ್ದರು.

‘ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ಭವಿಷ್ಯ ಮತ್ತು ಪೋಷಕರ ಪಾತ್ರ’ ಕುರಿತು ಉಜಿರೆ ಎಸ್.ಡಿ.ಎಂ.ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ.ವಂದನಾ ಜೈನ್ ವಿಚಾರ ಮಂಡಿಸಿದರು.

ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾ ಘಟಕದ ಉಪಾಧ್ಯಕ್ಷೆ ಶಾರದಾ ಆರ್.ರೈ, ಉಜಿರೆ ಸಂಧ್ಯಾ ಫ್ರೆಷ್‌ ಪ್ಯಾಕೇಜಿಂಗ್ ಯುನಿಟ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅರ್ಚನಾ ರಾಜೇಶ್ ಪೈ, ಉರುವಾಲು ಸತ್ಯಶ್ರೀ ಜ್ಞಾನ ವಿಕಾಸ ಕೇಂದ್ರದ ವಿಜಯ, ಮೊಗ್ರು ಆರಾಧನಾ ಜ್ಞಾನ ವಿಕಾಸ ಕೇಂದ್ರದ ಜಾನಕಿ ಮಾತನಾಡಿದರು.

ಗುರುವಾಯನಕೆರೆ ಪವಿತ್ರ ಜ್ಞಾನ ವಿಕಾಸ ಕೇಂದ್ರದ ಪ್ರಭಾವತಿ, ಸಾವ್ಯ ನಿಸರ್ಗ ಜ್ಞಾನ ವಿಕಾಸ ಕೇಂದ್ರದ ಸರೋಜಿನಿ, ಕರಿಮಣೇಲು ನಂದಾದೀಪ ಜ್ಞಾನ ವಿಕಾಸ ಕೇಂದ್ರದ ಯಮುನಾ, ಉರುವಾಲು ಸತ್ಯಶ್ರೀ ಜ್ಞಾನ ವಿಕಾಸ ಕೇಂದ್ರದ ವಿಜಯ ಅವರನ್ನು ಸನ್ಮಾನಿಸಲಾಯಿತು. 70 ವರ್ಷ ದಾಟಿದ ಹಿರಿಯ ಸದಸ್ಯರನ್ನು ಗುರುತಿಸಿ ಗೌರವಿಸಲಾಯಿತು.

ಟೈಲರಿಂಗ್ ಕಲಿತ ಫಲಾನುಭವಿಗಳಿಗೆ ಪ್ರಮಾಣಪತ್ರ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಅಚ್ಚಾಡಿ ಸೌಭಾಗ್ಯ ಜ್ಞಾನ ವಿಕಾಸ ಕೇಂದ್ರದ ಸದಸ್ಯರಾದ ಗುಲಾಬಿ ಮತ್ತು ಬಳಗ ಪ್ರಾರ್ಥಿಸಿದರು. ಗ್ರಾಮಾಭಿವೃದ್ದಿ ಯೋಜನೆಯ ಬಿ.ಸಿ.ಟ್ರಸ್ಟ್ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ.ಸ್ವಾಗತಿಸಿದರು. ಮೇಲ್ವಿಚಾರಕರಾದ ವಸಂತ ಮತ್ತು ವಿದ್ಯಾ ನಿರೂಪಿಸಿದರು. ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಹರಿಣಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT