ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೌಜನ್ಯಾ ಪ್ರಕರಣದ ಮರು ತನಿಖೆ: ಮೋದಿ ಘೋಷಿಸಲಿ- ಮಹೇಶ್ ಶೆಟ್ಟಿ ತಿಮರೋಡಿ

Published 10 ಏಪ್ರಿಲ್ 2024, 15:49 IST
Last Updated 10 ಏಪ್ರಿಲ್ 2024, 15:49 IST
ಅಕ್ಷರ ಗಾತ್ರ

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಯುವತಿ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐನಿಂದ ನ್ಯಾಯಾಲಯದ ಉಸ್ತುವಾರಿಯಲ್ಲಿ ಮರುತನಿಖೆ ನಡೆಸುವ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೈಕೋರ್ಟ್‌ಗೆ ಲಿಖಿತ ಅಭಿಪ್ರಾಯ ನೀಡಬೇಕು. ಏ.14ರಂದು ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಣೆ ಮಾಡಬೇಕು ಎಂದು ಸೌಜನ್ಯಾ ಪರ ಹೋರಾಟ ಸಮಿತಿ ಪ್ರಮುಖ ಮಹೇಶ್ ಶೆಟ್ಟಿ ತಿಮರೋಡಿ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರಕರಣ ಮರುತನಿಖೆ ನಡೆಸುವ ಸಂಬಂಧ ಹೈಕೋರ್ಟ್ ಸಿಬಿಐನಿಂದ ಅಭಿಪ್ರಾಯ ಕೇಳಿದೆ. ಸಿಬಿಐ ನೇರವಾಗಿ ಗೃಹ ಸಚಿವಾಲಯ ಮತ್ತು ಪ್ರಧಾನಿ ಕಚೇರಿ ಅಡಿಯಲ್ಲಿ ಬರುತ್ತದೆ. ಹೀಗಾಗಿ, ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿಗೆ ಬಿಜೆಪಿ ನಾಯಕರು ವಿಷಯ ಮನವರಿಕೆ ಮಾಡಿಕೊಟ್ಟು, ಅವರು ಇಲ್ಲಿ ಘೋಷಣೆ ಮಾಡುವಂತೆ ಆಗಬೇಕು. ಇಲ್ಲವಾದಲ್ಲಿ ಈ ಹಿಂದೆ ತಿಳಿಸಿದಂತೆ ಚುನಾವಣೆಯ ನೋಟಾ ಅಭಿಯಾನವನ್ನು ತೀವ್ರಗೊಳಿಸಲಾಗುವುದು’ ಎಂದರು.

ಸೌಜನ್ಯಾ ಪ್ರಕರಣದ ಮರು ತನಿಖೆಯ ಅಭಿಪ್ರಾಯವನ್ನು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆದಷ್ಟು ಶೀಘ್ರ ಹೈಕೋರ್ಟ್‌ಗೆ ನೀಡಬೇಕು, ವಂಚನೆಯಿಂದ ವಶಪಡಿಸಿಕೊಂಡ ಸಾವಿರಾರು ಎಕರೆ ಭೂಮಿಯನ್ನು ಧರ್ಮೋದ್ಯಮಿಗಳಿಂದ ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಈ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೂ ನೋಟಾ ಅಭಿಯಾನ ತೀವ್ರ ಗೊಳಿಸಲಾಗುವುದು. ಹೀಗಾದರೆ ಕ್ಷೇತ್ರದಲ್ಲಿ 2.5 ಲಕ್ಷ ಮತಗಳು ನೋಟಾಕ್ಕೆ ಬೀಳಲಿವೆ ಎಂದು ಎಚ್ಚರಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT