ಮಂಗಳೂರು: ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಷನ್ ಪ್ರದರ್ಶಿಸಿದ ಯಕ್ಷಗಾನ ಹಾಗೂ ಪಟ್ಲ ಫೌಂಡೇಷನ್ ಕಾರ್ಯ ಚಟುವಟಿಕೆಯನ್ನು ಮೆಚ್ಚಿ ಅಮೆರಿಕದ ವಿಸ್ಕಾನ್ಸಿನ್ ರಾಜ್ಯದ ಬ್ರೂಕ್‌ಫೀಲ್ಡ್ ನಗರದ ಮೇಯರ್ ಸ್ಟೀವನ್ ವಿ. ಪೋಂಟೊ ಅವರು ಆಗಸ್ಟ್ 18 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದಾರೆ.
ಅಮೆರಿಕ ತಿರುಗಾಟದಲ್ಲಿರುವ ಯಕ್ಷಧ್ರುವ ಪಟ್ಲ ಫೌಂಡೇಷನ್‌ನ ಒಂಬತ್ತು ಕಲಾವಿದರು ಕನ್ನಡ ಸಂಘಟನೆಗಳ ಸಹಕಾರದಲ್ಲಿ ವಿವಿಧೆಡೆ ಯಕ್ಷಗಾನ ಪ್ರದರ್ಶನ ನೀಡುತ್ತಿದ್ದಾರೆ.
ಈ ಸಾಧನೆಗೆ ಮಿಲ್ವಾಕಿ ಕನ್ನಡ ಸಂಘದವರು ಸಹಕಾರ ನೀಡಿದ್ದಾರೆ. ಇತ್ತೀಚೆಗೆ ಕ್ಯಾಲಿಫೋರ್ನಿಯಾ ರಾಜ್ಯದ ಫೀನಿಕ್ಸ್ ನಗರದ ಮೇಯರ್ ಅವರು ಜುಲೈ 27 ಅನ್ನು ‘ಯಕ್ಷಧ್ರುವ ಪಟ್ಲ ಫೌಂಡೇಷನ್ ಡೇ’ ಎಂದು ಘೋಷಿಸಿದ್ದರು ಎಂದು ಪ್ರವಾಸ ತಂಡದಲ್ಲಿರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ತಿಳಿಸಿದ್ದಾರೆ.