ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ: ಇಂದು ‘ಸ್ವಸ್ತಿ ಸಿರಿ’ ಪ್ರಶಸ್ತಿ ಪ್ರದಾನ

Published 24 ಮಾರ್ಚ್ 2024, 7:39 IST
Last Updated 24 ಮಾರ್ಚ್ 2024, 7:39 IST
ಅಕ್ಷರ ಗಾತ್ರ

ಬಂಟ್ವಾಳ: ಯಕ್ಷಗಾನ ಕ್ಷೇತ್ರದ ಸಾಧನೆಗಾಗಿ ಎಂಜಿನಿಯರಿಂಗ್ ವಿದ್ಯಾರ್ಥಿ ಅನ್ವೇಷ್ ಆರ್.ಶೆಟ್ಟಿ ಅವರು ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ‘ಸ್ವಸ್ತಿಸಿರಿ' ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಮಾರ್ಚ್‌ 24ರಂದು ಬೆಳಿಗ್ಗೆ ನಡೆಯಲಿರುವ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಪುಂಜಾಲಕಟ್ಟೆ ನಿವಾಸಿ, ರಂಗ ಕಲಾವಿದ ರತ್ನದೇವ್ ಶೆಟ್ಟಿ ಮತ್ತು ಶಿಕ್ಷಕಿ ಸುಜಾತಾ ಶೆಟ್ಟಿ ದಂಪತಿ ಪುತ್ರ ಅನ್ವೇಷ್ ಅವರು  ಯಕ್ಷಗಾನ ಕಲಾವಿದ ಯೋಗೀಶ್ ಆಚಾರ್ಯ ಅಳದಂಗಡಿ, ದಿನೇಶ್ ಶೆಟ್ಟಿ ಕಾವಳಕಟ್ಟೆ, ಪ್ರೇಮ್ ರಾಜ್ ಕೊಯಿಲ, ರಕ್ಷಿತ್ ಶೆಟ್ಟಿ ಪಡ್ರೆ, ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ಚಂದ್ರಶೇಖರ ಕೊಂಕಣಾಜೆ ಅವರಿಂದ ತರಬೇತಿ ಪಡೆದಿದ್ದಾರೆ.

ಕಟೀಲು ಮೇಳ ಸೇರಿದಂತೆ ವಿವಿಧ ಮೇಳಗಳಲ್ಲಿ ಪುಂಡು ವೇಷ, ಸ್ತ್ರೀವೇಷ, ರಾಜ ವೇಷ, ಕಿರೀಟ ವೇಷ, ಬಣ್ಣದ ವೇಷಗಳಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ.

ದೇವೇಂದ್ರ ಪಾತ್ರದಲ್ಲಿ ಅನ್ವೇಶ್ ಶೆಟ್ಟಿ
ದೇವೇಂದ್ರ ಪಾತ್ರದಲ್ಲಿ ಅನ್ವೇಶ್ ಶೆಟ್ಟಿ
ವರಾಹ ಪಾತ್ರದಲ್ಲಿ ಅನ್ವೇಶ್ ಶೆಟ್ಟಿ
ವರಾಹ ಪಾತ್ರದಲ್ಲಿ ಅನ್ವೇಶ್ ಶೆಟ್ಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT