ಬೆಂಗಳೂರು: ಐದು ದಶಕಗಳಿಂದ ಯಕ್ಷಗಾನ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ಅವರಿಗೆ 75 ವರ್ಷಗಳು ತುಂಬಿದ ಪ್ರಯುಕ್ತ ಅವರ ಅಭಿಮಾನಿಗಳು ಹಾಗೂ ಶಿಷ್ಯ ವೃಂದದವರು ನ.7ರಂದು ಮೂಡುಬಿದಿರೆಯ ಆಲಂಗಾರಿನ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
‘ಶ್ರೀ ಹರಿಲೀಲಾ-75- ಯಕ್ಷಾಭಿನಂದನಂ, ಶಿಷ್ಯಾಭಿವಂದನಂ ಹಾಗೂ ಯಕ್ಷನಾದೋತ್ಸವಂ’ ಕಾರ್ಯಕ್ರಮ ಆಯೋಜಿಸಲಾಗಿದೆ. ಪೂರ್ವರಂಗ ಪ್ರದರ್ಶನ, ಪಾರಂಪರಿಕ ಯಕ್ಷಗಾನೀಯ ಹಾಡುಗಳು, ಸಭಾ ಕಾರ್ಯಕ್ರಮ, ಗುರು ದಂಪತಿಗೆ ಅಭಿನಂದನೆ, ಅಭಿನಂದನಾ ಗ್ರಂಥ ಬಿಡುಗಡೆ, ಲೀಲಾವತಿ ಬೈಪಾಡಿತ್ತಾಯ ಅವರ ಆತ್ಮಕಥನ ಬಿಡುಗಡೆ, ಪರಂಪರೆಯ ಯಕ್ಷಗಾನ ಪ್ರದರ್ಶನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಇಡೀ ದಿನ ನಡೆಯಲಿವೆ. ಬೆಂಗಳೂರಿನಡಿಜಿ ಯಕ್ಷ ಫೌಂಡೇಷನ್ಬೈಪಾಡಿತ್ತಾಯ ದಂಪತಿ ಹೆಸರಿನಲ್ಲಿಹಿರಿಯ ಕಲಾವಿದರೊಬ್ಬರಿಗೆ ‘ಯಕ್ಷನಾದ ಪುರಸ್ಕಾರ’ ಪ್ರದಾನ ಮಾಡಲಿದೆ.
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷಎಂ. ಮೋಹನ್ ಆಳ್ವ ಅವರ ಗೌರವಾಧ್ಯಕ್ಷತೆಯಲ್ಲಿ ಅಭಿನಂದನಾ ಸಮಿತಿ ರಚಿಸಲಾಗಿದೆ. ಅಧ್ಯಕ್ಷರಾಗಿ ಚಂದ್ರಶೇಖರ ಭಟ್ ಕೊಂಕಣಾಜೆ, ಕಾರ್ಯದರ್ಶಿಯಾಗಿ ಆನಂದ ಗುಡಿಗಾರ ಕೆರ್ವಾಶೆ, ಕೋಶಾಧಿಕಾರಿಯಾಗಿ ಅವಿನಾಶ್ ಬೈಪಾಡಿತ್ತಾಯ, ಸಹ ಕಾರ್ಯದರ್ಶಿಗಳಾಗಿ ಗಿರೀಶ್ ಭಟ್ ಕಿನಿಲಕೋಡಿ, ಗುರುಪ್ರಸಾದ್ ಬೊಳಿಂಜಡ್ಕ ಹಾಗೂ ಗಿರೀಶ್ ರೈ ಕಕ್ಕೆಪದವು ಅವರನ್ನು ಆಯ್ಕೆ ಮಾಡಲಾಗಿದೆ.
ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ದಂಪತಿಯುನೂರಾರು ಹಿಮ್ಮೇಳ ವಾದಕರನ್ನು ಯಕ್ಷಗಾನ ರಂಗಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಈಗಲೂ ಶಿಷ್ಯರಿಗೆ ಯಕ್ಷ ಶಿಕ್ಷಣ ನೀಡುತ್ತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.