ಬಂಟ್ವಾಳ: ಯಕ್ಷಗಾನ ಕ್ಷೇತ್ರದಲ್ಲಿ ಬಣ್ಣದ ಮಾಲಿಂಗರ ಗರಡಿಯಲ್ಲಿ ಪಳಗಿದ ದಿ.ಸದಾಶಿವ ಶೆಟ್ಟಿಗಾರ್ ಅವರು ಬಣ್ಣಗಾರಿಕೆ, ಸ್ಪಷ್ಟ ಮಾತುಗಳಿಂದ ಮರೆಯಲಾಗದ ಛಾಪು ಮೂಡಿಸಿದ್ದಾರೆ ಎಂದು ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಹೇಳಿದರು.

ಇಲ್ಲಿನ ಸಿದ್ಧಕಟ್ಟೆ ಯಕ್ಷಮಿತ್ರರು ಪೂಂಜ ಇದರ ವಾರ್ಷಿಕೋತ್ಸವ ಪ್ರಯುಕ್ತ ಸಿದ್ಧಕಟ್ಟೆ ಫಲ್ಗುಣಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಬಣ್ಣದ ವೇಷಧಾರಿ ದಿ.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಹಾಗೂ ತಾಳಮದ್ದಳೆ ಕೂಟ’ದಲ್ಲಿ ಅವರು ಮಾತನಾಡಿದರು.

ಪೂಂಜ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುದರ್ಶನ್ ಶೆಟ್ಟಿ ಹಕ್ಕೇರಿ ಕಾರ್ಯಕ್ರಮ ಉದ್ಘಾಟಿಸಿದರು.

ಸಿದ್ಧಕಟ್ಟೆ ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರಿಂಕಿಜೆ ಅಧ್ಯಕ್ಷತೆ ವಹಿಸಿದ್ದರು.

ಹವ್ಯಾಸಿ ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ‘ಸಿದ್ಧಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಪೂಂಜ ಕ್ಷೇತ್ರದ ಕೃಷ್ಣ ಪ್ರಸಾದ್ ಆಸ್ರಣ್ಣ, ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವಲಯ ಸೇನಾನಿ ರಾಮಚಂದ್ರ ಶೆಟ್ಟಿಗಾರ್, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ಮಂಜಿಲ, ವಲಯ ಬಂಟರ ಸಂಘದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ, ಸಂಘಟಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಪ್ರಮುಖರಾದ ಉಮೇಶ್ ಹಿಂಗಾಣಿ, ಸುರೇಶ್ ಶೆಟ್ಟಿ ಸಿದ್ಧಕಟ್ಟೆ, ಸಚ್ಚಿದಾನಂದ ಭಟ್, ಯೋಗೀಶ್ ಕೈರೋಡಿ, ಶಶಿಧರ ಶೆಟ್ಟಿ ಕಲ್ಲಾಪು ಭಾಗವಹಿಸಿದ್ದರು.

ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಸ್ವಾಗತಿಸಿ, ಗಣೇಶ್ ಶೆಟ್ಟಿ ವಂದಿಸಿದರು. ಉಮೇಶ್ ಪಾಳ್ಯ ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿದರು. ಇಂದ್ರಜಿತು ಕಾಳಗ ಯಕ್ಷಗಾನ ತಾಳಮದ್ದಳೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.