ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಯೆನೆಪೋಯ ಕಾಲೇಜಿನಲ್ಲಿ ಉದ್ಯೋಗ ಮೇಳ 12ಕ್ಕೆ

Last Updated 9 ಆಗಸ್ಟ್ 2022, 14:15 IST
ಅಕ್ಷರ ಗಾತ್ರ

ಮಂಗಳೂರು: ಬಲ್ಮಠದಲ್ಲಿರುವ ಯೆನೆಪೋಯ ಪದವಿ ಕಾಲೇಜು ಮತ್ತು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಶ್ರಯದಲ್ಲಿ ಆ.12ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3.30ರವರೆಗೆ ಯೆನೆಪೋಯ ಕಾಲೇಜಿನಲ್ಲಿ ಉದ್ಯೋಗ ಮೇಳೆ ನಡೆಯಲಿದೆ ಎಂದು ಕಾಲೇಜಿನ ಉಪಪ್ರಾಂಶುಪಾಲೆ ಡಾ.ಶರೀನಾ ಪಿ. ಮಂಗಳವಾರ ಇಲ್ಲಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಎಸ್ಸೆಸ್ಸೆಲ್ಸಿ, ಪಿಯುಸಿ, ಐ.ಟಿ.ಐ, ಡಿಪ್ಲೊಮಾ, ಜಿ.ಎನ್.ಎಂ, ಎ.ಎನ್.ಎಂ, ಬಿ.ಎಸ್ಸಿ ನರ್ಸಿಂಗ್, ಬಿ.ಫಾರ್ಮಾ, ಎಂ.ಫಾರ್ಮಾ ಸೇರಿದಂತೆ ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ತೇರ್ಗಡೆಯಾದ ಅಭ್ಯರ್ಥಿಗಳು ಸ್ವ–ವಿವರ, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮೇಳದಲ್ಲಿ ಭಾಗವಹಿಸಬಹುದು’ ಎಂದರು.

ವಿನ್‌ಮನ್ ಸಾಫ್ಟ್‌ವೇರ್ ಇಂಡಿಯಾ, ಎಲ್‌ಎಲ್ಪಿ, ದಿಯಾ ಸಿಸ್ಟಮ್ಸ್, ಈಶ ಮೋಟಾರ್ಸ್, ಎಕ್ಸ್‌ಪರ್ಟ್ ಸಮೂಹ ಸಂಸ್ಥೆ, ಇನ್‌ವೆಂಜರ್ ಟೆಕ್ನಾಲಜೀಸ್, ಮೆಡ್‌ಪ್ಲಸ್, ಕೆಫೆ ಕಾಫಿ ಡೇ, ಎಚ್‌ಡಿಎಫ್‌ಸಿ ಬ್ಯಾಂಕ್ ಸಹಿತ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. 800 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 9108620123 ಈ ಮೊಬೈಲ್ ಫೋನ್ ಸಂಖ್ಯೆ ಸಂಪರ್ಕಿಸಬಹುದು ಎಂದರು. ಕಾಲೇಜಿನ ಉಪಪ್ರಾಂಶುಪಾಲ ಡಾ. ಜೀವನ್ ರಾಜ್, ಉದ್ಯೋಗ ನಿಯೋಜನಾ ಅಧಿಕಾರಿ ಪವಿತ್ರಾ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT