ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗ ಅರಸಿ ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕ ರೈಲು ಡಿಕ್ಕಿಯಾಗಿ ಸಾವು

ಉಳ್ಳಾಲ ಸಮೀಪದ ಸಂಕೊಳಿಗೆಯಲ್ಲಿ ರೈಲು ಢಿಕ್ಕಿ ಹೊಡೆದು ಯುವಕ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ
Published 11 ಫೆಬ್ರುವರಿ 2024, 11:02 IST
Last Updated 11 ಫೆಬ್ರುವರಿ 2024, 11:02 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಉಳ್ಳಾಲ ಸಮೀಪದ ಸಂಕೊಳಿಗೆಯಲ್ಲಿ ರೈಲು ಢಿಕ್ಕಿ ಹೊಡೆದು ಯುವಕ ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಅವರ ಪುತ್ರ ಜಾಫರ್ (23) ಮೃತರು. ಶನಿವಾರ ಸಂಜೆ ವೇಳೆ ಮನೆಗೆ ಮರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ಅವರಿಗೆ ರೈಲು ಢಿಕ್ಕಿ ಹೊಡೆದಿತ್ತು. ಅವರು ಸ್ಥಳದಲ್ಲೆ ಕೊನೆಯುಸಿರೆಳೆದಿದ್ದರು.

ಇತ್ತೀಚೆಗಷ್ಟೇ ಮುಂಬೈನಿಂದ ಕೆಲಸ ತ್ಯಜಿಸಿ ಊರಿಗೆ ಮರಳಿದ್ದ ಜಾಫರ್, ಸೌದಿ ವೀಸಾ ಬಂದಿದ್ದರಿಂದ ಫೆ.14 ರಂದು ಅಲ್ಲಿಗೆ ಉದ್ಯೋಗದ ನಿಮಿತ್ತ ತೆರಳಲು ಸಿದ್ಧತೆ ನಡೆಸಿದ್ದರು. ರೈಲ್ವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT