ಸೋಮವಾರ, ಸೆಪ್ಟೆಂಬರ್ 26, 2022
22 °C

ತಮ್ಮನಿಂದ ಅಣ್ಣನ ಕೊಲೆ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಟ್ಲ: ಅಣ್ಣನನ್ನು ತಮ್ಮನೇ ಹೊಡೆದು ಕೊಲೆ ಮಾಡಿರುವ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ಬನಾರಿ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗಣೇಶ್ ಬಂಗೇರ (54) ಕೊಲೆಯಾದವರು. ಅವರ ತಮ್ಮ ಪದ್ಮನಾಭ ಬಂಗೇರ (49) ಆರೋಪಿ.

ಪದ್ಮನಾಭ ಬಂಗೇರ, ಗಣೇಶ್ ಬಂಗೇರ ಅವರ ತಲೆ, ಎದೆ ಮತ್ತು ಮುಖಕ್ಕೆ ಆಯುಧದಿಂದ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಮೃತ ದೇಹದ ಬಟ್ಟೆಗಳನ್ನು ತೆಗೆದು, ದೇಹವನ್ನು ಸ್ವಚ್ಛಗೊಳಿಸಿ ಗಣೇಶ್ ಅವರು ಮಲಗುವ ಕೋಣೆಯ ಮಂಚದ ಮೇಲೆ ಮಲಗಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಸಾದ್ ಕುಮಾರ್ ಎಂಬುವರು ನೀಡಿದ ದೂರಿನಂತೆ, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು