ಗುರುವಾರ , ಏಪ್ರಿಲ್ 9, 2020
19 °C

ಅಕ್ಷಿತ್ ಸುವರ್ಣಗೆ ಜೀವ ಬೆದರಿಕೆ: ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಯುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರಿಗೆ ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

‘ಫೇಸ್‌ಬುಕ್‌ನಲ್ಲಿ ರಾಮ್‌ಪ್ರಸಾದ್ ಎಂಬ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದು, ನಾನು ಉದ್ಯಮ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಮಾಜ ಸೇವೆ ಹಾಗೂ ಯುವ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷನಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಆತನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ’ ದೂರಿನಲ್ಲಿ ಆಗ್ರಹಿಸಿದ್ದಾರೆ.

ಜಿಲ್ಲಾ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಮಧುಸೂದನ ಗೌಡ, ಉಪಾಧ್ಯಕ್ಷ ಮೊಹಮ್ಮದ್ ಆಸಿಫ್, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಫೈಝಲ್, ಮಂಗಳೂರು ಉತ್ತರ ಕ್ಷೇತ್ರಾಧ್ಯಕ್ಷ ರತೀಶ್ ಕರ್ಕೇರ, ಉಪಾಧ್ಯಕ್ಷ ಹಿತೇಶ್ ರೈ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು