ಭಾನುವಾರ, ಜುಲೈ 3, 2022
27 °C

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ಮಂಗಳೂರು: ಇಲ್ಲಿನ ಎಮ್ಮೆಕೆರೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಗುರುವಾರ ನಡೆದಿದೆ.

ಹೊಯಿಗೆಬಜಾರ್ ನಿವಾಸಿ ರಾಹುಲ್ (25) ಕೊಲೆಯಾದ ಯುವಕ. ಹಳೇ ದ್ವೇಷದ ಹಿನ್ನಲೆಯಲ್ಲಿ ದುಷ್ಕರ್ಮಿಗಳ ತಂಡ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎಮ್ಮೆಕೆರೆ ಪ್ರದೇಶದಲ್ಲಿ ನಡೆದಕೋಳಿ ಅಂಕಕ್ಕೆ ತೆರಳಿ ಮನೆಗೆ ವಾಪಸಾಗುತ್ತಿದ್ದ ವೇಳೆ ಕಾದುಕುಳಿತಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಾಹುಲ್‌ನನ್ನು ಕೊಲೆ ಮಾಡಿದೆ ಎನ್ನಲಾಗಿದೆ. ರಾಹಲ್ ರೌಡಿಶೀಟರ್ ಆಗಿದ್ದು, ಈತನ ವಿರುದ್ಧ ಮೂರು ಪ್ರಕರಣಗಳು ಇವೆ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು