ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಸಮುದಾಯದ ಸಮಸ್ಯೆ ನಿವಾರಣೆ ಆದ್ಯತೆಯಾಗಲಿ’

Published 28 ಫೆಬ್ರುವರಿ 2024, 6:13 IST
Last Updated 28 ಫೆಬ್ರುವರಿ 2024, 6:13 IST
ಅಕ್ಷರ ಗಾತ್ರ

ಮಂಗಳೂರು: ಪಾದಚಾರಿ ಮಾರ್ಗಗಳ ಕೊರತೆ, ಮಳೆ ನೀರು ಚರಂಡಿ, ಬಸ್, ರಸ್ತೆ ಅವ್ಯವಸ್ಥೆ ಮೊದಲಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಅಧಿಕಾರಿಗಳ ಗಮನ ಸೆಳೆದರು.

ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವ ಒಕ್ಕೂಟದ ಸಹಯೋಗದಲ್ಲಿ ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಯುವ ಸಂಸತ್‌ನಲ್ಲಿ ವಿದ್ಯಾರ್ಥಿ ತಮ್ಮ ಸಮಸ್ಯೆ ಹೇಳಿಕೊಂಡರು.

ನೆಹರು ಯುವ ಕೇಂದ್ರ ದಕ್ಷಿಣ ರಾಜ್ಯಗಳ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಶೇ 80ರಷ್ಟು ಜನರು ಕೃಷಿ ಅವಲಂಬಿಸಿದ್ದಾರೆ. ಆದರೆ, ಯುವಜನರ ನಗರ ಆಕರ್ಷಣೆಯಿಂದ ಹಳ್ಳಿಗಳು ಬರಿದಾಗುತ್ತಿವೆ. ಪುರುಷ ಮತ್ತು ಮಹಿಳೆಯರ ಲಿಂಗಾನುಪಾತದಲ್ಲಿ ಸಾಕಷ್ಟು ವ್ಯತ್ಯಾಸವಾಗಿದೆ. ಇಂತಹ ಅನೇಕ ಸಮಸ್ಯೆಗಳು ಯುವಜನರ ನಡುವೆ ಚರ್ಚೆಯಾಗಬೇಕಾಗಿದೆ. ಸಮುದಾಯಕ್ಕೆ ಎದುರಾಗಿರುವ ಸಮಸ್ಯೆಗಳನ್ನು ಚರ್ಚಿಸಲು ಯುವ ಸಂಸತ್ತು ವೇದಿಕೆಯಾಗಿದೆ ಎಂದರು.

ಹರಿಯಾಣ ಸರ್ಕಾರದ ಪ್ರವಾಸೋದ್ಯಮ ನಿಗಮದ ಸಾರ್ವಜನಿಕ ಸಂಪರ್ಕಾಧಿಕಾರಿ ವಿಲ್ಫ್ರೆಡ್ ಡಿಸೋಜ ಮಾತನಾಡಿ, ವಿದ್ಯಾರ್ಥಿಗಳು ದೇಶದ ಸಂಪತ್ತು.ಯುವಜನರಲ್ಲಿ ಒತ್ತಡ ಹೆಚ್ಚಾಗಿದ್ದು, ಒತ್ತಡ ನಿರ್ವಹಣೆ ರೂಢಿಸಿಕೊಂಡರೆ, ಜೀವನದಲ್ಲಿ ಯಶಸ್ಸು ಕಾಣಬಹುದು ಎಂದರು.

ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ನಿರ್ದೇಶಕ ಪ್ರದೀಪ್ ಡಿಸೋಜ, ರಥಬೀದಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜಯಕರ ಭಂಡಾರಿ ಎಂ., ಜಿಲ್ಲಾ ಯುವ ಫೆಡರೇಷನ್ ಅಧ್ಯಕ್ಷ ಸುರೇಶ್ ರೈ ಸುದೆಮುಲೆ, ನೆಹರು ಯುವ ಕೇಂದ್ರದ ಅಧಿಕಾರಿ ಲೋಕೇಶ್ ಕುಮಾರ್ ಇದ್ದರು.

ಬಲ್ಮಠ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಜಗದೀಶ್ ಬಾಳ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಶೈಲಾ ಕೆ.ಎನ್. ಸ್ವಾಗತಿಸಿದರು. ಜಗದೀಶ್ ಕೆ. ವಂದಿಸಿದರು. ನಂದಕಿಶೋರ್ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT