ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲ್ಯ: ಚೂರಿಯಿಂದ ಇರಿದು ಯುವಕನ ಹತ್ಯೆ

Published 14 ಡಿಸೆಂಬರ್ 2023, 5:52 IST
Last Updated 14 ಡಿಸೆಂಬರ್ 2023, 5:52 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲೊನಿಯಲ್ಲಿ ಯುವಕನನ್ನು ಬುಧವಾರ ರಾತ್ರಿ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿದೆ.

ಸಾರಸ್ವತ ಕಾಲೊನಿ ನಿವಾಸಿ ವರುಣ್ (28) ಹತ್ಯೆಯಾದವರು.

ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ಬುಧವಾರ ಮಧ್ಯರಾತ್ರಿ ವೇಳೆ ಸೂರಜ್ ಹಾಗೂ ಇನ್ನಿಬ್ಬರು ಮದ್ಯಪಾನ ನಡೆಸುತ್ತಿರುವುದನ್ನು ವರುಣ್ ಪ್ರಶ್ನಿಸಿದ್ದರು. ಇದರಿಂದ ಅಲ್ಲಿದ್ದ ಐದು ಮಂದಿಯ ನಡುವೆ ವಾಗ್ವಾದ ನಡೆದಿತ್ತು. ಇದಾದ ಬಳಿಕ ವರುಣ್ ಹೃದಯಭಾಗಕ್ಕೆ ಚೂರಿಯಿಂದ ತಿವಿಯಲಾಗಿದ್ದು ಅವರು ಕೊನೆಯುಸಿರೆಳೆದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಹಳೇ ವೈಷಮ್ಯದಿಂದ ಕೃತ್ಯ ನಡೆದಿರುವ ಸಾಧ್ಯತೆಗಳಿವೆ. ಸೋಮೇಶ್ವರ ಪುರಸಭೆಗೆ ಇದೇ 27ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಕೆಲವೇ ದಿನಗಳು ಬಾಕಿಯಿದೆ. ಈ ಸಂಬಂಧವೂ ಗಲಾಟೆ ನಡೆದಿರುವ ಸಾಧ್ಯತೆ ಉದೆ ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಸೋಮೇಶ್ವರ ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಎಂಬವರಿಗೂ ಗಾಯಗಳಾಗಿವೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT