ಭಾನುವಾರ, 10 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಆರೋಪಿ ಬಂಧನ

Published 25 ಸೆಪ್ಟೆಂಬರ್ 2023, 14:26 IST
Last Updated 25 ಸೆಪ್ಟೆಂಬರ್ 2023, 14:26 IST
ಅಕ್ಷರ ಗಾತ್ರ

ಉಪ್ಪಿನಂಗಡಿ : ಕಡಬ ತಾಲ್ಲೂಕಿನ ಮರ್ಧಾಳದಲ್ಲಿ ಮಸೀದಿ ಕಾಂಪೌಂಡ್ ಒಳಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ ಕೂಗಿರುವ ಆರೋಪದಲ್ಲಿ ಇಬ್ಬರು ಯುವಕರ ಮೇಲೆ ಪ್ರಕರಣ ದಾಖಲಾಗಿದ್ದು, ಒಬ್ಬರನ್ನು ಬಂಧಿಸಲಾಗಿದೆ.

ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್ (25) ಬಂಧಿತ ಆರೋಪಿ.

ಕೀರ್ತನ್ ಹಾಗೂ ಕೈಕಂಬ ನಡ್ತೋಟ ನಿವಾಸಿ ಸಚಿನ್ ಎಂಬವರು ಭಾನುವಾರ ರಾತ್ರಿ ಬೈಕ್‌ನಲ್ಲಿ ಬಂದು, ಮರ್ಧಾಳ ಬದ್ರಿಯಾ ಜುಮ್ಮಾ ಮಸೀದಿಯ ಕಾಂಪೌಂಡ್ ಒಳಗೆ ನುಗ್ಗಿ ವರಾಂಡದಲ್ಲಿ ನಿಂತು ‘ಜೈಶ್ರೀರಾಮ್’ ಘೋಷಣೆ ಕೂಗಿದ್ದಾರೆ. ಈ ವೇಳೆ ಮೌಲ್ವಿಯನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ಬೈಕ್‌ನಲ್ಲಿ ಕಾಂಪೌಂಡ್ ಒಳಗೆ ಬಂದು ತೆರಳಿರುವ ದೃಶ್ಯ ಸಿ.ಸಿ.ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT