ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಯೋಜನೆಗಳಿಗೆ ಒತ್ತು ನೀಡಿ: ಸಿಇಒ ಡಾ. ಸೆಲ್ವಮಣಿ

ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆ
Last Updated 29 ಸೆಪ್ಟೆಂಬರ್ 2020, 7:29 IST
ಅಕ್ಷರ ಗಾತ್ರ

ಮಂಗಳೂರು: ಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಬ್ಯಾಂಕ್‌ಗಳು ಬಾಕಿ ಇರಿಸಿಕೊಳ್ಳದೆ ಶೀಘ್ರ ಇತ್ಯರ್ಥಗೊಳಿಸಬೇಕು. ಸರ್ಕಾರಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆರ್. ಸೆಲ್ವಮಣಿ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬ್ಯಾಂಕ್‌ಗಳಿಗೆ ಸಲ್ಲಿಕೆಯಾಗುವ ಅರ್ಹ ಅರ್ಜಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡಬೇಕು. ಮಂಜೂರು ಮಾಡಲು ಸಾಧ್ಯವಾಗದ ಅರ್ಜಿಗಳನ್ನು ಬ್ಯಾಂಕಿನಲ್ಲಿ ಇರಿಸಿಕೊಳ್ಳದೇ, ಅರ್ಜಿದಾರರಿಗೆ ಕಾರಣಗಳ ಸಹಿತ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಕೋವಿಡ್-19 ಸಂದರ್ಭದಲ್ಲೂ ಕೆಲವು ಬ್ಯಾಂಕ್ ನಿಗದಿತ ಗುರಿಯನ್ನು ಸಾಧಿಸುವಲ್ಲಿ ಯಶಸ್ವಿಯಾಗಿವೆ. ಕೆಲವು ಬ್ಯಾಂಕ್‌ಗಳು ವಿಫಲವಾಗಿವೆ. ಮುಂದಿನ ದಿನಗಳಲ್ಲಿ ಹೊಸ ಗುರಿಯನ್ನು ತಲುಪಬೇಕು. ಶೈಕ್ಷಣಿಕ ಸಾಲ ಮತ್ತು ಗೃಹ ಸಾಲದಲ್ಲಿ ಹಲವು ಬ್ಯಾಂಕ್‌ಗಳು ಉತ್ತಮ ಸಾಧನೆ ತೋರಿವೆ. ಕೃಷಿ ಕ್ಷೇತ್ರ, ಗೃಹಸಾಲ, ಶೈಕ್ಷಣಿಕ ಸಾಲದಲ್ಲಿ ಜಿಲ್ಲೆಯು ಉತ್ತಮ ಸಾಧನೆ ತೋರುವಲ್ಲಿ ಬ್ಯಾಂಕ್‌ಗಳು ಶ್ರಮಿಸಬೇಕು ಎಂದರು.

ಲೀಡ್ ಬ್ಯಾಂಕ್‌ ಆದ ಕೆನರಾ ಬ್ಯಾಂಕಿನ ಪ್ರವೀಣ್ ಮಾತನಾಡಿ, 2020-21ನೇ ಸಾಲಿನಲ್ಲಿ ಕೃಷಿವಲಯಲ್ಲಿ ಶೇ 70.40 ಸಾಧನೆಯ ಮಾಡಲಾಗಿದೆ. ಎಂಎಸ್ಎಂಇ ಕ್ಷೇತ್ರದಲ್ಲಿ ಶೇ 78.27 ಗುರಿ ಸಾಧಿಸಿದೆ. ಮುದ್ರಾ ಯೋಜನೆ ಅಡಿಯಲ್ಲಿ ಜಿಲ್ಲೆಯ ಬ್ಯಾಂಕ್‌ಗಳು ಒಟ್ಟು 3,380 ಖಾತೆಗಳಿಗೆ ಸಾಲ ವಿತರಣೆ ಮಾಡಿವೆ ಎಂದು ವಿವರಿಸಿದರು.

ನರ್ಬಾಡ್ ಡಿಡಿಎಂ ಸಂಗೀತಾ ಕರ್ತಾ, ಕೆನರಾ ಬ್ಯಾಂಕ್ ಡಿಜಿಎಂ ಸುಚಿತ್ರಾ, ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರು, ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT