ಪುತ್ತೂರು: ತಾಲ್ಲೂಕಿನ ನರಿಮೊಗರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರಿಮೊಗರು ಮತ್ತು ಶಾಂತಿಗೋಡು ಗ್ರಾಮಗಳಲ್ಲಿ ಇತ್ತೀಚೆಗೆ ಸುರಿದ ವಿಪರೀತ ಮಳೆಯಿಂದ ಹಾನಿಯಾದ ವಿವಿಧ ಪ್ರದೇಶ ಮತ್ತು ಮನೆಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆನಂದ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಪಲ್ಲತ್ತೋಡಿಯಲ್ಲಿ ಮಳೆಯಿಂದ ರಸ್ತೆ ಬದಿಯಲ್ಲಿ ಭೂಕುಸಿತ ಉಂಟಾಗಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ಸಿಇಒ, ವೀರಮಂಗಲ ಗುತ್ತು ನಾರ್ಣಪ್ಪ ಗೌಡ ಅವರ ಮನೆಯ ಬಳಿ ಧರೆ ಕುಸಿಯುವ ಸಾಧ್ಯತೆ ಇರುವುದರಿಂದ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ವೀರಮಂಗಲದ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದರು.

ಪುತ್ತೂರು ತಾ.ಪಂ ಇಒ ನವೀನ್ಕುಮಾರ್ ಭಂಡಾರಿ ಎಚ್, ತಾಲ್ಲೂಕು ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ವಿಲ್ಫ್ರೆಡ್ ರೋಡ್ರಿಗಸ್, ನರಿಮೊಗರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಯು ಈ ವೇಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.