ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಎದುರಿನ ಉದ್ಯಾನದಲ್ಲಿ ಮಂಗಳವಾರ ತಡರಾತ್ರಿ ಶರತ್ ಎಂಬ ಯುವಕನನ್ನು ಹೆಂಚಿನಿಂದ ಹೊಡೆದು ಕೊಲೆ ಮಾಡಲಾಗಿದೆ.

ಉದ್ಯಾನದ ಒಳಗೆ ಯುವಕನ ಮೇಲೆ ಹೆಂಚುಗಳಿಂದ ಹಲ್ಲೆ ನಡೆಸಲಾಗಿದೆ. ಆತನ ಮೈಮೇಲೆ ಕಾಂಕ್ರೀಟ್ ಚಪ್ಪಡಿಯನ್ನು ಇರಿಸಿ ಕೊಲೆ ಮಾಡಲಾಗಿದೆ. ಕೊಲೆ ನಡೆಸಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಬುಧವಾರ ಬೆಳಿಗ್ಗೆ ಸ್ಥಳೀಯರು ವಾಯುವಿಹಾರಕ್ಕೆ ಬಂದಾಗ ಕೊಲೆ ನಡೆದಿರುವುದು ಗೊತ್ತಾಗಿದೆ. ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ. ಕೊಲೆಯಾದ ಯುವಕ ಶರತ್ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.