ಉಡುಪಿ: ದ್ವಿತೀಯ ಪಿಯು ಪರೀಕ್ಷೆಗಳು ಜಿಲ್ಲೆಯಾದ್ಯಂತ ಗುರುವಾರ ಆರಂಭವಾಗಿದ್ದು ಜಿಲ್ಲೆಯ ಒಟ್ಟು 25 ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆಗಳಲ್ಲಿಯೂ ಶಾಂತಿಯುತವಾಗಿ ಪರೀಕ್ಷೆ ನಡೆದಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.ಮೊದಲ ದಿನದ ಪರೀಕ್ಷೆಯಲ್ಲಿ 141 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬಿಸಿನೆಸ್ ಸ್ಟಡಿ ವಿಷಯದಲ್ಲಿ 6,797 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಲ್ಲಿ 6,898 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 93 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಇನ್ನು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗೆ 3,342 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು ಅವರಲ್ಲಿ 3,299 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 48 ವಿದ್ಯಾರ್ಥಿಗಳು ಗೈರುಹಾಜರಿದ್ದರು. ಜಿಲ್ಲೆಯಲ್ಲಿ ಈ ಬಾರಿ 12,614 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿದ್ದು ಅವರಲ್ಲಿ 6,905 ಬಾಲಕಿಯರು ಹಾಗೂ 5709 ಬಾಲಕರು ಸೇರಿದ್ದಾರೆ. ಉಡುಪಿ-13, ಕುಂದಾಪುರ-8 ಹಾಗೂ ಕಾರ್ಕಳದಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಆಯಾ ಕಾಲೇಜಿನ ಪ್ರಾಂಶುಪಾಲರು ಮುಖ್ಯ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದರು.

ಹೊಟ್ಟೆಯೊಳಗೆ ಮಗು; ‘ಉತ್ತರ’ದ ನಗು!
ಪರೀಕ್ಷಾ ಹಾಲ್ಗಳಿಗೆ ವಿದ್ಯಾರ್ಥಿಗಳು ಸಾಕಷ್ಟು ಉತ್ಸಾಹದಿಂದಲೇ ಹಾಜರಾಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಇದು ನಗರದ ಪ್ರಮುಖ ಪರೀಕ್ಷಾ ಕೇಂದ್ರಗಳಲ್ಲಿ ಕಂಡು ಬಂತು. ಉಡುಪಿ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ತುಂಬು ಗರ್ಭಿಣಿಯೊಬ್ಬರು ಪರೀಕ್ಷೆಗೆ ಹಾಜರಾಗಿದ್ದರು.

ಇನ್ನೂ ವಿಶೇಷವೆಂದರೆ ವೈದ್ಯರು ಇದೇ ದಿನವನ್ನು ಆಕೆಗೆ ‘ಹೆರಿಗೆಯ ದಿನ’ವೆಂದು ಈಗಾಗಲೇ ಘೋಷಿಸಿದ್ದರು. ಆದರೂ ಆಕೆ ಧೈರ್ಯದಿಂದ ಪರೀಕ್ಷೆಗೆ ಆಗಮಿಸಿದ್ದರು. ಆಕೆಯ ಅಪ್ಪ- ಅಮ್ಮ ಪರೀಕ್ಷಾ ಕೇಂದ್ರದ ಹೊರಗೆ ಮಗಳು ಯಶಸ್ವಿಯಾಗಿ ಪರೀಕ್ಷೆ ಮುಗಿಸಿ ಬರುವುದನ್ನೇ ಎದುರು ನೋಡುತ್ತ ಕುಳಿತುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.