ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾ ಮನೋಭಾವನೆ ಅಗತ್ಯ

Last Updated 18 ಸೆಪ್ಟೆಂಬರ್ 2019, 14:55 IST
ಅಕ್ಷರ ಗಾತ್ರ

ವಿಜಯಪುರ: ‘ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸೋಲು-ಗೆಲುವಿನ ಬಗ್ಗೆ ಯೋಚಿಸದೇ ಕ್ರೀಡಾ ಮನೋಭಾವನೆಯಿಂದ ಪಾಲ್ಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಿವಯೋಗೆಪ್ಪ ನೇದಲಗಿ ಸಲಹೆ ನೀಡಿದರು.

ನಗರ ಹೊರವಲಯದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ 2019-20ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕ್ರೀಡಾಪಟುಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಬೆಳಗಿಸಬೇಕು’ ಎಂದರು.

ರಾಷ್ಟ್ರೀಯ ಯುವಜನೋತ್ಸವ ಸಮಿತಿಯ ಡಾ.ಜಾವಿದ್ ಎಂ.ಜಮಾದಾರ ಮಾತನಾಡಿ, ‘ಗ್ರಾಮೀಣ, ನಗರದ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಇಂದಿನ ಮಕ್ಕಳು ಕೇವಲ ಪಠ್ಯ ಪುಸ್ತಕದಿಂದ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಕ್ರೀಡಾಭಿಮಾನವನ್ನು ಮರೆಯುತ್ತಿದ್ದಾರೆ. ಅಂತಹವರಿಗೆ ಕ್ರೀಡೆಯ ಮಹತ್ವವನ್ನು ತಿಳಿಸಿ, ಅವರಲ್ಲಿ ಆಸಕ್ತಿ ಮೂಡುವಂತೆ ಮಾಡಬೇಕಿದೆ’ ಎಂದು ಹೇಳಿದರು.

ಡಾ.ಜ್ಯೋತಿ ಉಪಾಧ್ಯಾಯ ಮಾತನಾಡಿದರು. ಸಂಜೀವ ಸಿ., ಆರತಿ ಚವ್ಹಾಣ, ಸಂತೋಷ ಎಸ್.ನಿಗಡಿ ಇದ್ದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ.ಲೋಣಿ ಸ್ವಾಗತಿಸಿದರು. ನಾಗರಾಜ ಬಿರಾದಾರ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT