ಗುರುವಾರ , ಅಕ್ಟೋಬರ್ 29, 2020
19 °C

ಮಳೆಗೆ ₹ 4.95 ಲಕ್ಷ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯ ವಿವಿಧೆಡೆ ಸೋಮವಾರ ಆಗಾಗ ತುಂತುರು ಮಳೆಯಾಗಿದೆ. ಭಾನುವಾರ 5 ಮಿ.ಮೀ ಸರಾಸರಿ ಮಳೆಯಾಗಿದ್ದು, ಅಂದಾಜು ₹ 4.95 ಲಕ್ಷ ನಷ್ಟ ಸಂಭವಿಸಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಚನ್ನಗಿರಿ ತಾಲ್ಲೂಕಿನಲ್ಲಿ 3 ಮಿ.ಮೀ (7 ಮಿ.ಮೀ ವಾಡಿಕೆ), ದಾವಣಗೆರೆ ತಾಲ್ಲೂಕಿನಲ್ಲಿ 5 ಮಿ.ಮೀ (9 ಮಿ.ಮೀ ವಾಡಿಕೆ), ಹರಿಹರ ತಾಲ್ಲೂಕಿನಲ್ಲಿ 6 ಮಿ.ಮೀ (6 ಮಿ.ಮೀ ವಾಡಿಕೆ), ಹೊನ್ನಾಳಿ ತಾಲ್ಲೂಕಿನಲ್ಲಿ 3 ಮಿ.ಮೀ (7 ಮಿ.ಮೀ ವಾಡಿಕೆ), ಜಗಳೂರು ತಾಲ್ಲೂಕಿನಲ್ಲಿ 4 ಮಿ.ಮೀ (4 ಮಿ.ಮೀ ವಾಡಿಕೆ) ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ 5 ಮಿ.ಮೀ (5 ಮಿ.ಮೀ ವಾಡಿಕೆ) ಮಳೆಯಾಗಿದೆ. ಜಿಲ್ಲೆಯಲ್ಲಿ ಸರಾಸರಿ 5 ಮಿ.ಮೀ (5 ಮಿ.ಮೀ ವಾಡಿಕೆ) ಮಳೆಯಾಗಿದೆ.

ದಾವಣಗೆರೆ ತಾಲ್ಲೂಕಿನಲ್ಲಿ ಮೂರು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, 1 ಲಕ್ಷ ನಷ್ಟವಾಗಿದೆ. 21.05 ಎಕರೆ ಮೆಕ್ಕೆಜೋಳ ಹಾನಿಯಾಗಿದ್ದು, ₹ 1.50 ಲಕ್ಷ ನಷ್ಟ ಸಂಭವಿಸಿದೆ. ನ್ಯಾಮತಿ ತಾಲ್ಲೂಕಿನಲ್ಲಿ ಎರಡು ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ₹ 40 ಸಾವಿರ ನಷ್ಟ ಸಂಭವಿಸಿದೆ.

ಚನ್ನಗಿರಿ ತಾಲ್ಲೂಕಿನಲ್ಲಿ ಒಂದು ಪಕ್ಕಾ ಮನೆಗೆ ಭಾಗಶಃ ಹಾನಿಯಾಗಿದ್ದು, ₹ 25 ಸಾವಿರ ಹಾಗೂ 10 ಕಚ್ಚಾ ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ₹ 1.80 ಲಕ್ಷ ನಷ್ಟವಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ ₹ 4.95 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು