ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರಿಗೆ ಶೇ 1ರಷ್ಟು ಸ್ತನ, ಗರ್ಭಕೋಶದ ಕ್ಯಾನ್ಸರ್

Published 7 ಮಾರ್ಚ್ 2024, 6:53 IST
Last Updated 7 ಮಾರ್ಚ್ 2024, 6:53 IST
ಅಕ್ಷರ ಗಾತ್ರ

ದಾವಣಗೆರೆ: ಅಂಕಿ ಅಂಶಗಳ ಪ್ರಕಾರ ರಾಜ್ಯದ ಮಹಿಳೆಯರಲ್ಲಿ ಪ್ರತಿ ವರ್ಷ ಸ್ತನ ಹಾಗೂ ಗರ್ಭಕೋಶದ ಕ್ಯಾನ್ಸರ್‌ ಶೇ 1ರಷ್ಟು ಹೆಚ್ಚಾಗುತ್ತಿದೆ ಎಂದು ಎಸ್.ಎಸ್. ಕೇರ್ ಟ್ರಸ್ಟ್‌ನ ಲೈಫ್ ಟ್ರಸ್ಟಿ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಎಸ್. ಎಸ್. ಕೇರ್ ಟ್ರಸ್ಟ್‌ ವತಿಯಿಂದ ಬುಧವಾರ ಆಯೋಜಿಸಿದ್ದ ‘ಕ್ಯಾನ್ಸರ್‌ ಕಾಳಜಿ’ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು.

‘ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಾಗೂ ಸಂಘ ಸಂಸ್ಥೆಗಳಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದ ಅವಶ್ಯಕತೆ ಇದ್ದರೆ ಟ್ರಸ್ಟ್‌ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗುವುದು’ ಎಂದು ಹೇಳಿದರು.

ಮಹಿಳೆಯರಿಗೆ ಉಪಯುಕ್ತವಾದ ಹಾಗೂ ಅರಿವು ಮೂಡಿಸುವಂತಹ ಈ ರೀತಿಯ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು ಎಂದು ಬಿ.ಇ.ಎ. ಆಡಳಿತ ಮಂಡಳಿ ಸದಸ್ಯೆ ಕಿರುವಾಡಿ ಗಿರಿಜಮ್ಮ ‌ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ‘ಜಿಲ್ಲೆಯ ಪ್ರತಿ ಹಳ್ಳಿ ಜನರಿಗೂ ಉಚಿತ ಆರೋಗ್ಯ ಕಾರ್ಡ್ ನೀಡಿ, ಸಂಚಾರಿ ಆರೋಗ್ಯ ತಪಾಸಣಾ ಕ್ಲಿನಿಕ್‌ಗಳನ್ನು ಆರಂಭಿಸಿ ಆರೋಗ್ಯದ ಜಾಗೃತಿ ಮೂಡಿಸುವುದು ಹಾಗೂ ದಾವಣಗೆರೆಯನ್ನು ಆರೋಗ್ಯವಂತ ಜಿಲ್ಲೆಯನ್ನು ಮಾಡಬೇಕು ಎಂಬ ನಿಟ್ಟಿನಲ್ಲಿ ಈ ಟ್ರಸ್ಟ್ ಜಾಗೃತಿ ಮೂಡಿಸುತ್ತಿರುವುದು ಹೆಮ್ಮೆಯ ಸಂಗತಿ’ ಎಂದರು.

ಗಿರಿಜಾ ಬಾಬುಗೌಡ ನಾಡಗೌಡರ್, ಜೆ.ಜೆ.ಎಂ. ಕಾಲೇಜಿನ ಪ್ರಾಂಶುಪಾಲರಾದ ಶುಕ್ಲಾ ಶೆಟ್ಟಿ, ಎಸ್.ಎಸ್. ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ ಲಿಂಗನಗೌಡ ಎಸ್. ಪಾಟೀಲ್, ವಿಶ್ವಾರಾಧ್ಯ ಕ್ಯಾನ್ಸರ್ ಆಸ್ಪತ್ರೆಯ  ನಿರ್ದೇಶಕ ಜಗದೀಶ್ ತುಬಾಚಿ, ಲತಾ ಜಿ.ಎಸ್., ಶುಭಾ ಡಿ.ಬಿ., ಹಾಗೂ ಗಾಯತ್ರಿ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT