ಸೋಮವಾರ, ಸೆಪ್ಟೆಂಬರ್ 27, 2021
21 °C

ಹಳದಮ್ಮ ದೇವಿ ಹುಂಡಿಯಲ್ಲಿ ₹11.80ಲಕ್ಷ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ತಾಲ್ಲೂಕಿನ ಮಾರಿಕೊಪ್ಪ ಗ್ರಾಮದ ಪ್ರಸಿದ್ಧ ಹಳದಮ್ಮ ದೇವಿ ದೇವಸ್ಥಾನದ ಹುಂಡಿಯನ್ನು ಬುಧವಾರ ಗ್ರಾಮಸ್ಥರ ಸಮ್ಮುಖದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಎಣಿಕೆ ಮಾಡಿದರು.

ಹುಂಡಿಯಲ್ಲಿ ₹ 11,80 ಲಕ್ಷ ನಗದು ಹಾಗೂ ₹ 30 ಸಾವಿರ  ಮೌಲ್ಯದ ಬೆಳ್ಳಿ, ಬಂಗಾರದ ಆಭರಣಗಳು ದೊರೆತಿವೆ ಎಂದು ತಹಶೀಲ್ದಾರ್ ಎಚ್. ಮಲ್ಲಿಕಾರ್ಜುನ ತಿಳಿಸಿದರು.

ಅರ್ಚಕರಾದ ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ಜಯರಾಂ, ಮುಜರಾಯಿ ಇಲಾಖೆ ಸಿಬ್ಬಂದಿ ಮಂಜಪ್ಪ, ಗ್ರಾಮ ಲೆಕ್ಕಾಧಿಕಾರಿ ಮುನೇಶ್, ಭರ್ಮಪ್ಪ, ಚೆಲುವರಾಜ್, ಗ್ರಾಮದ ಮುಖಂಡ ಮೈಲಪ್ಪ, ಕೆನರಾ ಬ್ಯಾಂಕಿನ ಸಿಬ್ಬಂದಿ ರಾಮಣ್ಣ, ಆಚಾರ್, ಗ್ರಾಮ ಸಹಾಯಕರು, ಕಂದಾಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು