ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ಸೇವನೆ: ಮೆಡಿಕಲ್‌, ಡೆಂಟಲ್‌ ಕಾಲೇಜಿನ 12 ವಿದ್ಯಾರ್ಥಿಗಳು ವಶಕ್ಕೆ

Last Updated 5 ಜನವರಿ 2019, 12:38 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಸಿದ್ದವೀರಪ್ಪ ಬಡಾವಣೆಯ ಮನೆಯೊಂದರ ಮೇಲೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಪೊಲೀಸರು ಗಾಂಜಾ ಸೇವನೆ ಮಾಡುತ್ತಿದ್ದ 12 ಮಂದಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ₹ 15 ಸಾವಿರ ಮೌಲ್ಯದ 500 ಗ್ರಾಂ ಗಾಂಜಾ ಸೊಪ್ಪು ವಶಪಡಿಸಿಕೊಳ್ಳಲಾಗಿದೆ.

ಇವರೆಲ್ಲರೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಓದಲು ದಾವಣಗೆರೆಗೆ ಬಂದವರು. ಬೆಂಗಳೂರು, ಉಡುಪಿ ಮತ್ತು ಕೇರಳದವರಾಗಿದ್ದು, ವಿಚಾರಣೆ ನಡೆಸಲಾಗುತ್ತಿದ್ದ. ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪೋಷಕರು, ಪ್ರಾಂಶುಪಾಲರ ಜತೆ ಸಮಾಲೋಚನೆ:ವಿದ್ಯಾರ್ಥಿಗಳಲ್ಲಿ ಕೆಲವರು ಹಲವು ತಿಂಗಳುಗಳಿಂದ ಗಾಂಜಾ ಸೇವನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ, ಅವರನ್ನು ದುಶ್ಚಟ ಮುಕ್ತ ಕೇಂದ್ರಗಳಿಗೆ ದಾಖಲಿಸುವ ಬಗ್ಗೆ ಸಮಲೋಚನೆ ನಡೆಸಲಾಗಿದೆ. ಈ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಿದವರನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಿಇಎನ್ ಅಪರಾಧ ಪೊಲೀಸ್ ಠಾಣೆಯ ನಿರೀಕ್ಷಕ ಟಿ.ವಿ. ದೇವರಾಜ ಹಾಗೂ ಸಿಬ್ಬಂದಿ ರವಿ, ಪ್ರಕಾಶ, ವೀರಭದ್ರಪ್ಪ, ರಮೇಶ, ಈಶ್ವರಪ್ಪ, ಶ್ರೀನಿವಾಸ, ಸುರೇಶ್‌ಬಾಬು, ಪ್ರಕಾಶ್‌ರಾವ್, ನಾಗರಾಜ, ಲೋಹಿತ, ಮಂಜುನಾಥ, ಸುರೇಶ್, ಮಾರುತಿ, ಸಚಿನ್, ಮಂಜುನಾಥ ಮಠೋಳಿ, ಸಂಗೇನಹಳ್ಳಿ ದೇವರಾಜ, ನಾಗರಾಜಪ್ಪ ಕಾರ್ಯಾಚರಣೆ ನಡೆಸಿದ್ದಾರೆ.

ಗಾಂಜಾ ನಿಯಂತ್ರಣಕ್ಕೆ ಪ್ರತ್ಯೇಕ ವಿಭಾಗ
ನಗರದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಗಾಂಜಾ ಸೇವನೆ ಚಟಕ್ಕೆ ಬಿದ್ದಿರುವ ಬಗ್ಗೆ ಮಾಹಿತಿಯಿದ್ದು, ಈ ಪಿಡುಗನ್ನು ನಾಶ ಮಾಡಲು ಪೊಲೀಸ್‌ ಇಲಾಖೆ ಮುಂದಾಗಿದೆ. ಇದಕ್ಕಾಗಿ ಪ್ರತ್ಯೇಕ ವಿಭಾಗ ಸ್ಥಾಪಿಸಲಾಗಿದೆ. ಗಾಂಜಾ ಮತ್ತು ಇತರೆ ಮಾದಕ ವಸ್ತುಗಳ ಸೇವನೆ, ಮಾರಾಟ ಪ್ರಕರಣಗಳ ಬಗ್ಗೆ ಮಾಹಿತಿ ಇದ್ದರೆ ನಾಗರಿಕರು ದಾವಣಗೆರೆಯ ಸಿಇಎನ್ ಠಾಣೆ ಪೋನ್ ದೂ. 08192–225119 ಅಥವಾ ಪೊಲೀಸ್ ನಿರೀಕ್ಷಕರ ಮೊಬೈಲ್: 82779 81962 ಸಂಪರ್ಕಿಸಬಹುದು ಎಂದು ಎಸ್‌ಪಿ ಚೇತನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT