ಬುಧವಾರ, ಆಗಸ್ಟ್ 4, 2021
24 °C

130 ಕ್ವಿಂಟಲ್ ಪಡಿತರ ಅಕ್ಕಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಇಲ್ಲಿನ ಆಜಾದ್‌ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಒಟ್ಟು ₹ 1.95 ಲಕ್ಷ ಮೌಲ್ಯದ 130.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್‌. ರಸ್ತೆಯ ರಾಜ್ ಶಾದಿಮಹಲ್ ರಸ್ತೆಯ ಚಿಗಟೇರಿ ಮಿಲ್ ಪಕ್ಕದ ಸಲೀಂ ಎಂಬುವವರಿಗೆ ಸೇರಿದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ₹ 1.01 ಲಕ್ಷ ಮೌಲ್ಯದ 67.5 ಕ್ವಿಂಟಲ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕೆ.ಆರ್‌. ರಸ್ತೆಯ ಜಗಳೂರು ಬಸ್‌ ನಿಲ್ದಾಣದ ಬಳಿಯ ಜಯಣ್ಣ ಅವರಿಗೆ ಸೇರಿದ ಗೋದಾಮಿನಲ್ಲಿ ಸಂಗ್ರಹಿಸಿದ್ದ ₹ 94,500 ಮೌಲ್ಯದ 63 ಕ್ವಿಂಟಲ್‌ನ 140 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಕಿ ಶಶಿಕುಮಾರ್ ಅವರಿಗೆ ಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಹಾರ ನಿರೀಕ್ಷಕ ರವಿ ಶಿವಮೂರ್ತಿ ಹಿಪ್ಪರಗಿ ಅವರು ನೀಡಿದ ದೂರು ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. ಆಜಾದ್‌ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡಿಸಿಆರ್‌ಬಿ ಘಟಕದ ಡಿವೈಎಸ್ಪಿ ಬಸವರಾಜ್ ಮಾರ್ಗರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶೈಲಜಾ, ಸಿಬ್ಬಂದಿ ಮಹಮ್ಮದ್ ಖಾನ್, ರವಿನಾಯ್ಕ, ಕರಿಬಸಪ್ಪ, ಪ್ರಕಾಶ್, ರಾಘವೇಂದ್ರ, ನಟರಾಜ್, ಮಾರುತಿ, ಬಾಲರಾಜ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಪಡಿತರದ ಅಕ್ಕಿಯನ್ನು ಕಡಿಮೆ ದರಕ್ಕೆ ಖರೀದಿಸಿ ಅಧಿಕ ದರಕ್ಕೆ ಮಾರಾಟ ಮಾಡುವ ಈ ಅಕ್ರಮವನ್ನು ನಿಲ್ಲಿಸಲು ಕ್ರಮ ಕೈಗೊಳ್ಳಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಅದಕ್ಕಾಗಿಯೇ ತಂಡ ರಚಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.