ದಾವಣಗೆರೆ: 1990ರಲ್ಲಿ ದಾವಣಗೆರೆಯಲ್ಲಿ ನಡೆದ ಗೋಲಿಬಾರ್ನಲ್ಲಿ ಮೃತಪಟ್ಟವರ ಸವಿನೆನಪಿಗಾಗಿ ₹10 ಲಕ್ಷದ ಮೌಲ್ಯದ 15 ಕೆ.ಜಿ.ತೂಕದ ಬೆಳ್ಳಿಯ ಇಟ್ಟಿಗೆಯನ್ನು ಅಯೋಧ್ಯೆಗೆ ನೀಡಲು ಇಲ್ಲಿನ ಶ್ರೀರಾಮ ಭಕ್ತರು ಹಾಗೂ ಹಿಂದೂಪರ ಸಂಘಟನೆಗಳ ಮುಖಂಡರು ನಿರ್ಧರಿಸಿದ್ದಾರೆ.

‘1990ರ ಅಕ್ಟೋಬರ್ 6ರಂದು ಬೇತೂರು ರಸ್ತೆಯಲ್ಲಿರುವ ವೆಂಕಟೇಶ್ವರ ವೃತ್ತದಲ್ಲಿ ನಡೆದ ಗೋಲಿಬಾರ್ನಲ್ಲಿ 8 ಜನರು ಮೃತಪಟ್ಟಿದ್ದು, 72ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿ 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಅಂದು ಹುತಾತ್ಮರಾದ 8 ಮಂದಿಯ ಹೆಸರನ್ನು ಇಟ್ಟಿಗೆಯಲ್ಲಿ ಕೆತ್ತಿಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಅಕ್ಟೋಬರ್ 6ರಂದು ದಾವಣಗೆರೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಮೃತರ ಕುಟುಂಬದವರು ಹಾಗೂ ಗಾಯಗೊಂಡವರನ್ನು ಸನ್ಮಾನಿಸಲಾಗುವುದು. ಬೆಳ್ಳಿ ಇಟ್ಟಿಗೆಗೆ ಪೂಜೆ ಸಲ್ಲಿಸಿ ಅಂದು ನಡೆಯುವ ಶ್ರೀರಾಮ ಜ್ಯೋತಿಯ ಮೆರವಣಿಗೆ ನಂತರ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳ ಮೂಲಕ ಇಲ್ಲವೇ ನೇರವಾಗಿ ನಾವೇ ಅಯೋಧ್ಯೆಗೆ ಹೋಗಿ ತಲುಪಿಸುತ್ತೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.