ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಸಿಇಟಿ: 1,538 ವಿದ್ಯಾರ್ಥಿಗಳು ಗೈರು

Published 18 ಏಪ್ರಿಲ್ 2024, 16:17 IST
Last Updated 18 ಏಪ್ರಿಲ್ 2024, 16:17 IST
ಅಕ್ಷರ ಗಾತ್ರ

ದಾವಣಗೆರೆ: ವೃತ್ತಿಪರ ಕೋರ್ಸ್‍ಗಳ ಸಿಇಟಿ ಪರೀಕ್ಷೆ ನಗರದಲ್ಲಿ ಗುರುವಾರ ಸುಗಮವಾಗಿ ನಡೆಯಿತು. ನಗರದ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನೆ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್ ಸೇರಿದಂತೆ ಇತರೆ ಕೋರ್ಸ್‍ಗಳಿಗೆ ಬೆಳಗಿನ ಅವಧಿಯಲ್ಲಿ ಜೀವವಿಜ್ಞಾನ ವಿಷಯದ ಪರೀಕ್ಷೆ ನಡೆಯಿತು. ಮಧ್ಯಾಹ‌್ನ ಗಣಿತದ ಪರೀಕ್ಷೆ ನಡೆಯಿತು.

ಜೀವವಿಜ್ಞಾನ ವಿಷಯಕ್ಕೆ 1281 ವಿದ್ಯಾರ್ಥಿಗಳು ಹಾಗೂ ಗಣಿತಕ್ಕೆ 257 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಜೀವವಿಜ್ಞಾನಕ್ಕೆ 12,296 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 11,015 ವಿದ್ಯಾರ್ಥಿಗಳು ಹಾಜರಾದರು. ಗಣಿತಕ್ಕೆ 12,300 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 12,043 ವಿದ್ಯಾರ್ಥಿಗಳು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ತಿಳಿಸಿದ್ದಾರೆ.

ದಾವಣಗೆರೆಯ ಮೋತಿ ವೀರಪ್ಪ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು
ದಾವಣಗೆರೆಯ ಮೋತಿ ವೀರಪ್ಪ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು
ಸಿಇಟಿ ಪರೀಕ್ಷೆಯಲ್ಲಿ ಹಿನ್ನೆಲೆಯಲ್ಲಿ ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಸೂಚನಾ ಫಲಕದಲ್ಲಿ ಕೊಠಡಿ ಸಂಖ್ಯೆ ಪರಿಶೀಲಿಸಿಸುತ್ತಿರುವುದು –ಪ್ರಜಾವಾಣಿ ಚಿತ್ರ/ಸತೀಶ ಬಡಿಗೇರ್
ಸಿಇಟಿ ಪರೀಕ್ಷೆಯಲ್ಲಿ ಹಿನ್ನೆಲೆಯಲ್ಲಿ ದಾವಣಗೆರೆಯ ಎವಿಕೆ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಸೂಚನಾ ಫಲಕದಲ್ಲಿ ಕೊಠಡಿ ಸಂಖ್ಯೆ ಪರಿಶೀಲಿಸಿಸುತ್ತಿರುವುದು –ಪ್ರಜಾವಾಣಿ ಚಿತ್ರ/ಸತೀಶ ಬಡಿಗೇರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT