ಮಂಗಳವಾರ, ಅಕ್ಟೋಬರ್ 19, 2021
22 °C

ಜಿನಿಗಿಹಳ್ಳಕ್ಕೆ 2 ಬ್ಯಾರೇಜ್: ಶಾಸಕ ಎಸ್.ವಿ. ರಾಮಚಂದ್ರ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜಗಳೂರು: ತಾಲ್ಲೂಕಿನ ತೊರೆಸಾಲು ಪ್ರದೇಶದಲ್ಲಿ ಶಾಶ್ವತ ಅಂತರ್ಜಲ ಹೆಚ್ಚಳದ ದೃಷ್ಟಿಯಿಂದ ಜಿನಿಗಿಹಳ್ಳಕ್ಕೆ ಎರಡು ಬೃಹತ್ ಬ್ಯಾರೇಜ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.

ತಾಲ್ಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ವಿಶ್ವೇಶ್ವರಯ್ಯ ಜಲನಿಗಮದಿಂದ ₹ 1.35 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಭಾನುವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ತೊರೆಸಾಲು ಪ್ರದೇಶದ ಪುರಾತನ ಜಿನಿಗಿ ಹಳ್ಳದಲ್ಲಿ ಪ್ರತಿ ಮಳೆಗಾಲದಲ್ಲಿ ಭಾರಿ ಪ್ರಮಾಣದಲ್ಲಿ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ. ಅಮೂಲ್ಯ ಜಲರಾಶಿಯನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಆಕನೂರು ಮತ್ತು ಕಮಂಡಲಗುಂದಿ ಗ್ರಾಮಗಳ ಸಮೀಪ ಎರಡು ದೊಡ್ಡ ಬ್ಯಾರೇಜ್‌ಗಳನ್ನು ನಿರ್ಮಿಸಲಾಗುವುದು. ಇದರಿಂದ ಈ ಭಾಗದ ರೈತರಿಗೆ ಸಾಕಷ್ಟು ಅನುಕೂಲವಾಗಿದೆ. ಮುಂದಿನ ದಿನಗಳಲ್ಲೂ ವ್ಯಾಪಕವಾಗಿ ಚೆಕ್ ಡ್ಯಾಂಗಳನ್ನು ನಿರ್ಮಿಸಲಾಗುವುದು ಎಂದು ಶಾಸಕರು ತಿಳಿಸಿದರು.

ಭದ್ರಾ ಮೆಲ್ದಂಡೆ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಕೆಂದ್ರ ಸರ್ಕಾರ ₹ 1,200 ಕೋಟಿ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಂದ ನವೆಂಬರ್ 5ರಂದು ಚಾಲನೆ ನೀಡಲಾಗುವುದು. ಭದ್ರಾ ಮೇಲ್ದಂಡೆ ಯೋಜನೆಯಡಿ ತಾಲ್ಲೂಕಿನ 46 ಎಕರೆ ಪ್ರದೇಶಕ್ಕೆ ನೀರಾವರಿ ಕೈಗೊಳ್ಳಲಾಗುವುದು ಎಂದು ಶಾಸಕರು ಹೇಳಿದರು.

ಬಿಜೆಪಿ ಮಂಡಲ ಅಧ್ಯಕ್ಷ ಎಚ್.ಸಿ. ಮಹೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್. ನಾಗರಾಜ್, ಮುಖಂಡರಾದ ರಘುರಾಮ್ ರೆಡ್ಡಿ, ಇಂದ್ರೇಶ್, ಅರವಿಂದ ಪಾಟೀಲ್, ಎಇಇ ಮಧುಕುಮಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು