ಬುಧವಾರ, ಅಕ್ಟೋಬರ್ 21, 2020
21 °C

ದಾವಣಗೆರೆ: ₹2 ಲಕ್ಷ ಮೌಲ್ಯದ ಹಸಿ ಗಾಂಜಾ ಗಿಡ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಶೃಂಗಾರಬಾಗು ‌ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಮೆಕ್ಕೆಜೋಳದ ಮಧ್ಯೆ ಬೆಳೆದಿದ್ದ ₹ 2ಲಕ್ಷ ಮೌಲ್ಯದ ಹಸಿ ಗಾಂಜಾ ಗಿಡಗಳನ್ನು ಅಬಕಾರಿ ಪೊಲೀಸರು ಬುಧವಾರ ವಶಪಡಿಸಿಕೊಂಡಿದ್ದಾರೆ.

ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 130 ಹಸಿ ಗಾಂಜಾ ಗಿಡ (36.4 ಕೆ.ಜಿ)ವನ್ನು ವಶಪಡಿಸಿಕೊಂಡಿದ್ದು, ಪ್ರಕರಣದ ಆರೋಪಿ ಶೃಂಗಾರಬಾಗು ಗ್ರಾಮದ ಹನುಮಂತಪ್ಪ (57) ತಲೆಮರೆಸಿಕೊಂಡಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

ಅಬಕಾರಿ ಉಪ ಆಯುಕ್ತ ಬಿ.ಶಿವಪ್ರಸಾದ್, ಹೊನ್ನಾಳಿ ಉಪವಿಭಾಗದ ಡಿವೈಎಸ್‌ಪಿ ಅಧೀಕ್ಷಕ ವೀರೇಶ್ ಬಿ ಚಿಕ್ಕರೆಡ್ಡಿ, ಚನ್ನಗಿರಿ ವಲಯದ ಎಸ್‌ಐ ನೌಷಾದ್ ಅಹಮದ್ ಖಾನ್, ಅಬಕಾರಿ ಎಸ್ಐ ನಿರೀಕ್ಷಕ ರಮೇಶ್ ಬಿ.ಅಗಡಿ, ಪಿಎಸ್‌ಐ ರಮೇಶ್ ಕೆ.ಎಚ್ ಹಾಗೂ ಭರತೇಶ್ ಶಿರೋಳ್ ದಾಳಿಯಲ್ಲಿ ಪಾಲ್ಗೊಂಡಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು