ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

25ರಂದು ‘ಕಲ್ಯಾಣದೆಡೆಗೆ’ ಪುಸ್ತಕ ಲೋಕಾರ್ಪಣೆ

Last Updated 22 ಡಿಸೆಂಬರ್ 2019, 14:08 IST
ಅಕ್ಷರ ಗಾತ್ರ

ದಾವಣಗೆರೆ: ಇಲ್ಲಿನ ಸಹಮತ ವೇದಿಕೆಯಿಂದ ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ 100ನೇ ಕೃತಿ ‘ಕಲ್ಯಾಣದೆಡೆಗೆ’ ಲೋಕಾರ್ಪಣೆ ಸಮಾರಂಭ ಡಿ. 25ರಂದು ಬೆಳಿಗ್ಗೆ 11.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ವೇದಿಕೆಯ ಅಧ್ಯಕ್ಷ ಡಾ. ಎಚ್‌.ಎಸ್‌. ಮಂಜುನಾಥ ಕುರ್ಕಿ ಹೇಳಿದರು.

ಆಗಸ್ಟ್ 1ರಿಂದ 31 ರವರೆಗೆ ರಾಜ್ಯದ ವಿವಿಧೆಡೆ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಶರಣರ ತತ್ವ ಸಾರುವ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಸಂದೇಶಗಳನ್ನು ಒಟ್ಟುಗೂಡಿಸಿ ಪುಸ್ತಕದ ರೂಪದಲ್ಲಿ ಹೊರತರಲಾಗಿದೆ. ಸಂದೇಶಗಳ ಕೃತಿಯನ್ನು ಇದೇ ಮೊದಲಬಾರಿಗೆ ನಗರದಲ್ಲಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಚಿಂತಕ ಡಾ. ಬಸವರಾಜ ಸಾದರ ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಶರಣಪ್ಪ ಎಸ್‌. ಹಲಸೆ, ವೇದಿಕೆಯ ಗೌರವಾಧ್ಯಕ್ಷ ಎಚ್‌.ಕೆ. ರಾಮಚಂದ್ರಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸ್ವಾಮೀಜಿ ಅವರ 100 ಕೃತಿಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿವೇದಿಕೆಯ ಗೌರವಾಧ್ಯಕ್ಷ ಎಚ್‌.ಕೆ. ರಾಮಚಂದ್ರಪ್ಪ, ಉಪಾಧ್ಯಕ್ಷ ಎ.ಆರ್‌. ಉಜ್ಜನಪ್ಪ, ಬಿ. ದಿಳ್ಯಪ್ಪ, ಜಿ.ಆರ್‌. ಷಣ್ಮುಖಪ್ಪ, ನಾಗರಾಜ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT