ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾಳಿ ಆಸ್ಪತ್ರೆಗೆ 250 ಹಾಸಿಗೆ ಶೀಘ್ರ

ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳದಲ್ಲಿ ಎಂ.ಪಿ.ರೇಣುಕಾಚಾರ್ಯ
Last Updated 26 ಏಪ್ರಿಲ್ 2022, 6:15 IST
ಅಕ್ಷರ ಗಾತ್ರ

ಹೊನ್ನಾಳಿ: ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ 250 ಹಾಸಿಗೆ ಹಾಗೂ ನ್ಯಾಮತಿ ಸಾರ್ವಜನಿಕ ಆಸ್ಪತ್ರೆಗೆ 100 ಹಾಸಿಗೆಗಳಿಗೆ ಶೀಘ್ರ ಮಂಜೂರಾತಿ ಸಿಗಲಿದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಿಂದ ಸೋಮವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಈ ಹಿಂದೆ ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ 50 ಹಾಸಿಗೆಗಳ ವ್ಯವಸ್ಥೆ ಮಾತ್ರ ಇತ್ತು. ಅದನ್ನು 100 ಹಾಸಿಗೆಗಳಿಗೆ ಏರಿಸಿದ್ದೇನೆ. ನ್ಯಾಮತಿ ಸಾರ್ವಜನಿಕ ಆಸ್ಪತ್ರೆಯಲ್ಲಿನ 30 ಹಾಸಿಗೆಗಳನ್ನು 50 ಹಾಸಿಗೆಗಳಿಗೆ ಹೆಚ್ಚಿಸಲಾಗಿದೆ. ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚು ಹಾಸಿಗೆಗಳಿಗೆ ಪ್ರಸ್ತಾವ ಸಲ್ಲಿಸಿದ್ದು, ಡಿಪಿಆರ್ ಆಗಿದೆ’ ಎಂದು ಹೇಳಿದರು.

ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಮುರುಳೀಧರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪುರಸಭೆ ಅಧ್ಯಕ್ಷ ಬಾಬು ಹೋಬಳದಾರ್, ಉಪಾಧ್ಯಕ್ಷೆ ರಂಜಿತಾ ಚನ್ನಪ್ಪ, ಡಾ. ಗಂಗಾಧರ್, ಸ್ಥಾನಿಕ ವೈದ್ಯಾಧಿಕಾರಿ ಡಾ.ಚಂದ್ರಪ್ಪ, ತಾಲ್ಲೂಕು ಪ್ರಬಾರಿ ವೈದ್ಯಾಧಿಕಾರಿ ಡಾ. ಗಿರೀಶ್, ಡಾ. ಸುರೇಶ್, ಸಿಪಿಐ ದೇವರಾಜ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ಕುಮಾರ್ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ಶಿವಪದ್ಮ ಇದ್ದರು.

ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಮಳಿಗೆಗಳನ್ನು ಹಾಕಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT