ಭಾನುವಾರ, ಅಕ್ಟೋಬರ್ 24, 2021
21 °C
₹ 7.67 ಕೋಟಿ ಪರಿಹಾರ ಕೊಡಿಸಿದ ನ್ಯಾಯಾಲಯ

ಲೋಕ ಅದಾಲತ್‌ನಲ್ಲಿ 2,909 ಪ್ರಕರಣ ಇತ್ಯರ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕಾನೂನು ಸೇವಾ ಪ್ರಾಧಿಕಾರದ ಆಶ್ರಯದಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಗುರುವಾರ ನಡೆದ ಬೃಹತ್‌ ಲೋಕ ಅದಾಲತ್‌ನಲ್ಲಿ ಒಟ್ಟು 2,909 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು.

ಜಿಲ್ಲೆಯ 18 ಕಡೆಗಳಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 7,192 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 2,909 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಒಟ್ಟು ₹ 7.67 ಕೋಟಿ ಪರಿಹಾರವನ್ನು ಕೊಡಿಸಲಾಯಿತು.

ರಾಜಿಯಾಗಬಲ್ಲ 247 ಅಪರಾಧ ಪ್ರಕರಣಗಳನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 60 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಯಿತು. ನೆಗೋಶಿಯಬಲ್ ಇನ್‌ಸ್ಟ್ರುಮೆಂಟ್ಸ್‌ ಆ್ಯಕ್ಟ್‌ನಡಿ 532 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇವುಗಳ ಪೈಕಿ 76 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹ 2.49 ಕೋಟಿ ಪರಿಹಾರ ಕೊಡಿಸಲಾಗಿದೆ.

ಬ್ಯಾಂಕ್‌ಗೆ ಸಂಬಂಧಿಸಿದ 61 ಪ್ರಕರಣಗಳ ಪೈಕಿ 8 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹ 24.61 ಲಕ್ಷ ಪರಿಹಾರ ಕಲ್ಪಿಸಲಾಯಿತು.

ಮೋಟರು ವಾಹನ ಕಾಯ್ದೆಯಡಿ ಬಂದಿದ್ದ ಒಟ್ಟು 275 ಪ್ರಕರಣಗಳ ಪೈಕಿ 62 ಪ್ರಕರಣಗಳನ್ನು ಬಗೆಹರಿಸಿ, ₹ 2.37 ಕೋಟಿ ಪರಿಹಾರವನ್ನು ಕೊಡಿಸಲಾಯಿತು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ನೇತೃತ್ವದಲ್ಲಿ ಜಿಲ್ಲೆಯ 18 ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್ ನಡೆಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.