ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ದಿನಗಳ ಲಸಿಕಾ ಮೇಳಕ್ಕೆ ಚಾಲನೆ

ದಿನಕ್ಕೆ 40 ಸಾವಿರ ಮಂದಿಗೆ ಲಸಿಕೆ ನೀಡುವ ಗುರಿ: ಡಿಸಿ
Last Updated 12 ಅಕ್ಟೋಬರ್ 2021, 3:16 IST
ಅಕ್ಷರ ಗಾತ್ರ

ದಾವಣಗೆರೆ: ಮನೆ ಮನೆಗೂ ಹೋಗಿ ಜಾಗೃತಿ ಮೂಡಿಸಿದರೂ ಅನೇಕ ಜನರು ತಪ್ಪು ಕಲ್ಪನೆಯಿಂದ ಲಸಿಕೆ ಪಡೆಯಲು ಹಿಂಜರಿಯುತಿದ್ದಾರೆ. ವಾಸ್ತವ ಸತ್ಯವನ್ನು ತಿಳಿಸಲು, ಜಾಗೃತಿಗೊಳಿಸಲು ಅ.11ರಿಂದ 13ರವರಗೆ ಮೂರು ದಿನಗಳ ಕಾಲ ವಿಶೇಷ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ದಿನಕ್ಕೆ 30 ಸಾವಿರದಿಂದ 40 ಸಾವಿರ ಲಸಿಕೆ ನೀಡುವ ಗುರಿ ಇದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ನಗರದ ಗಡಿಯಾರ ಕಂಬ ವೃತ್ತದಲ್ಲಿ ಜಿಲ್ಲಾಡಳಿತ, ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಗೆ 12 ಲಕ್ಷ ಕೋವಿಡ್ ಲಸಿಕೆ ನೀಡುವ ಗುರಿ ನೀಡಲಾಗಿತ್ತು. ಈಗಾಗಲೇ ಸುಮಾರು 9.40 ಲಕ್ಷ ಲಸಿಕೆ ಹಾಕಲಾಗಿದೆ. ಸುಮಾರು 3 ಲಕ್ಷ ಜನರಿಗೆ ಮೊದಲ ಹಂತದ ಲಸಿಕೆ ಹಾಗೂ 1.66 ಲಕ್ಷ ಜನರಿಗೆ 2ನೇ ಡೋಸ್ ಲಸಿಕೆ ನೀಡುವುದು ಬಾಕಿ ಇದೆ. ಹಳೆ ದಾವಣಗೆರೆ ಭಾಗದಲ್ಲಿ ಹೆಚ್ಚಿನ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತ್ತು ಉಪ ವಿಭಾಗಧಿಕಾರಿ ಮಮತಾ ಹೊಸಗೌಡರ್‌ ಅವರು ‘ಲಗಾಯೇಂಗೆ ಲಗಾಯೇಂಗೆ ಕೋವಿಡ್ ಲಸಿಕಾ ಲಗಾಯೇಂಗೆ’ ಘೋಷಣೆ ಕೂಗುತ್ತಾ ಗಡಿಯಾರ ಕಂಬ, ಕಾಳಿಕಾದೇವಿ ರಸ್ತೆ, ಅಹಮದ್ ನಗರ, ಅರಳೀಮರ ವೃತ್ತ ಹಾಗೂ ಆಜಾದ್ ನಗರಗಳಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಡಿವೈಎಸ್‍ಪಿ ಬಿ.ಎಸ್. ಬಸವರಾಜ್, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಅಮಿತ್ ಬಿದರಿ, ಆರ್‌ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT