ಚನ್ನಗಿರಿ: ಅಮಾನತುಗೊಂಡಿದ್ದ ಗ್ರಂಥಾಲಯದ ಮೇಲ್ವಿಚಾರಕರನ್ನು ಕರ್ತವ್ಯಕ್ಕೆ ಮರುನಿಯೋಜಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ (TP) ಕಾರ್ಯನಿರ್ವಾಹಕ ಅಧಿಕಾರಿಯ ಜೀಪ್ ಚಾಲಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ಉತ್ತಮ್ ಅವರ ಕಾರು ಚಾಲಕ ಶ್ಯಾಮಕುಮಾರ್ ಬಂಧಿತ ಆರೋಪಿ. ಲಂಚದ ರೂಪದಲ್ಲಿ ಪಡೆದ ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿದ್ದಾರೆ. ಇವರು ದಿನಗೂಲಿ ಆಧಾರದ ಮೇರೆಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದರು.

ತಾಲ್ಲೂಕಿನ ಬೆಳ್ಳಿಗನೂಡು ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕ ಶಫೀವುಲ್ಲಾ ಕರ್ತವ್ಯಲೋಪದ ಆರೋಪದ ಮೇರೆಗೆ ಫೆಬ್ರುವರಿಯಲ್ಲಿ ಅಮಾನತುಗೊಂಡಿದ್ದರು. ಕರ್ತವ್ಯಕ್ಕೆ ಮರುನಿಯೋಜಿಸಲು ₹ 50,000 ಲಂಚಕ್ಕೆ ಶ್ಯಾಮ್ಕುಮಾರ್ ಬೇಡಿಕೆ ಇಟ್ಟಿದ್ದರು. ಈ ಕುರಿತು ಶಫೀವುಲ್ಲಾ ಲೋಕಾಯುಕ್ತ ಪೊಲೀಸರಿಗೆ ಮಾರ್ಚ್ 21ರಂದು ದೂರು ನೀಡಿದ್ದರು.

‘ಶ್ಯಾಮ್ಕುಮಾರ್ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸೋಮವಾರ ಲಂಚದ ಹಣದಲ್ಲಿ ₹ 40,000 ಪಡೆಯುವಾಗ ದಾಳಿ ನಡೆಸಿ ಬಂಧಿಸಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಕೌಲಾಪೂರೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.